National

ಸಿಡಿ ಕೇಸ್‌; ರಮೇಶ್‌ ಜಾರಕಿಹೊಳಿಗೆ ಮತ್ತೆ ಸಂಕಷ್ಟ

ನವದೆಹಲಿ: ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ರಮೇಶ್‌ ಜಾರಕಿಹೊಳಿಗೆ (ramesh jarakiholi) ಮತ್ತೆ ಕಾನೂನು ಸಂಕಷ್ಟ ಎದುರಾಗಿದೆ. ಸಂತ್ರಸ್ತ ಯುವತಿ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದು, ಸೋಮವಾರ ವಿಚಾರಣೆ ನಡೆಯುವ ಸಾಧ್ಯತೆ ಇದೆ.

ಮಾಜಿ ಸಚಿವ ​ರಮೇಶ್ ಜಾರಕಿಹೊಳಿ ವಿರುದ್ಧದ ಸಿಡಿ ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಲಾಗಿತ್ತು. ಆದ್ರೆ, ಎಸ್‌ಐಟಿ ತನಿಖೆಗೆ ಯುವತಿ ವಿರೋಧಿಸಿದ್ದರು. ಜೊತೆಗೆ ಎಸ್‌ಐಟಿ ವರದಿಯನ್ನು ಅಂಗೀಕರಿಸದಂತೆ ಮನವಿ ಮಾಡಿದ್ದರು. ಆದ್ರೆ ವಿಚಾರಣಾ ನ್ಯಾಯಾಲಯದಲ್ಲಿ ವರದಿ ಸಲ್ಲಿಸಲು ಕಳೆದ ವಾರ ಹೈಕೋರ್ಟ್ (high court) ಎಸ್‌ಐಟಿಗೆ ಅನುಮತಿ ನೀಡಿತ್ತು. ಆದರೆ ಸಂತ್ರಸ್ತ ಯುವತಿ ಈ ಮಧ್ಯಂತರ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.

Share Post