National

9 ವರ್ಷದ ಮಗಳ ಮೇಲೆ ಅತ್ಯಾಚಾರ ಮಾಡಿದ ಪಾಪಿ

ಫತೇಪುರ: ಪಾಪಿ ತಂದೆಯೊಬ್ಬ ಕುಡಿದ ಅಮಲಿನಲ್ಲಿ ತನ್ನ 9 ವರ್ಷದ ಮಗಳ ಮೇಲೆಯೇ ಅತ್ಯಾಚಾರ ಎಸಗಿರುವ ದಾರುಣ ಘಟನೆ ಖಾಗಾ ಕೊತ್ವಾಲಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾತ್ರಿ ವೇಳೆ ಬಾಲಕಿ ತಂದೆಯ ಪಕ್ಕದಲ್ಲೇ ಮಲಗಿದ್ದಳು. ಕುಡಿದ ಅಮಲಿನಲ್ಲಿದ್ದ ಪಾಪಿ ತಂದೆ, ಮಗಳ ಮೇಲೆಯೇ ಅತ್ಯಾಚಾರ ಎಸಗಿದ್ದಾನೆ ಎಂದು ಗೊತ್ತಾಗಿದೆ.
ತಂದೆಯಿಂದ ಅತ್ಯಾಚಾರಕ್ಕೊಳಗಾಗಿ ಬಾಲಕಿ ನೋವಿನಿಂದ ಅಳುತ್ತಿದ್ದಳು. ಇದನ್ನು ಕೇಳಿ ಆರೋಪಿಯ ಸಹೋದರ ಸ್ಥಳಕ್ಕೆ ಬಂದಾಗ ಅತ್ಯಾಚಾರ ನಡೆದಿರುವುದು ಗೊತ್ತಾಗಿದೆ. ಕೋಡಲೇ ಆರೋಪಿಯ ಸಹೋದರ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಸದ್ಯ ಸಂತ್ರಸ್ತೆಯನ್ನು ವೈದ್ಯಕೀಯ ತಪಾಸಣೆಗೆ ಕಳುಹಿಸಲಾಗಿದೆ. ಬಾಲಕಿಯ ತಾಯಿ ಕೆಲವು ವರ್ಷಗಳ ಹಿಂದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Share Post