ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ
ಅಸ್ಸಾಂ: ಆರು ವರ್ಷದ ಪುಟ್ಟ ಬಾಲಕಿ ಮೇಲೆ ೧೫ ವರ್ದ ಬಾಲಕನೊಬ್ಬ ಅತ್ಯಾಚಾರ ವೆಸಗಿರುವ ದಾರುಣ ಘಟನೆ ಅಸ್ಸಾಂನ ಹೈಲಕಂಡಿಯಲ್ಲಿ ನಡೆದಿದೆ. ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪದ ಮೇಲೆ 15 ವರ್ಷದ ಬಾಲಕನನ್ನು ಬಂಧಿಸಲಾಗಿದೆ .
ಫೆಬ್ರವರಿ 9 ರಂದು ರಸ್ತೆಯಲ್ಲಿ ಇತರ ಮಕ್ಕಳೊಂದಿಗೆ ಆಟವಾಡುತ್ತಿದ್ದಾಗ ಬಾಲಕಿ ಕಾಣೆಯಾಗಿದ್ದಳು. ಎರಡು ದಿನಗಳ ನಂತರ , ಆಕೆಯ ಮೃತದೇಹ ಹತ್ತಿರದ ಅರಣ್ಯದಲ್ಲಿ ಪತ್ತೆಯಾಗಿತ್ತು. ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂಬುದು ಮರಣೋತ್ತರ ಪರೀಕ್ಷೆಯಲ್ಲಿ ಗೊತ್ತಾಗಿತ್ತು. ತನಿಖೆಯ ನಂತರ , ಪೊಲೀಸರು ಸಾಕ್ಷ್ಯ ನಾಶಪಡಿಸಲು ಯತ್ನಿಸಿದ ಅಪ್ರಾಪ್ತ ಮತ್ತು ಆತನ ತಂದೆಯನ್ನು ಬಂಧಿಸಿದ್ದಾರೆ.