National

ಕಾಮಪಿಪಾಸುವಾದ ಹೆತ್ತ ತಂದೆ; ಯುವತಿ ಆತ್ಮಹತ್ಯೆ

ಬಾಂದಾ: ಉತ್ತರ ಪ್ರದೇಶದಲ್ಲಿ ತಂದೆಯ ಪೈಶಾಚಿಕ ಕೃತ್ಯದಿಂದ ಮನನೊಂದು ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇಲ್ಲಿನ ಬಾಂದಾ ಮರ್ಕಾ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ. ಎರಡು ದಿನದ ಹಿಂದೆ ಸ್ವಂತ ತಂದೆಯೇ ತನ್ನ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ. ಇದರಿಂದ ಮನನೊಂದಿದ್ದ ಹದಿನೆಂಟು ವರ್ಷದ ಮಗಳು ನೇಣಿಗೆ ಕೊರಳೊಡ್ಡಿದ್ದಾಳೆ.

ಗುರುವಾರ ರಾತ್ರಿ ಆರೋಪಿ ಈ ಕೃತ್ಯ ಎಸಗಿದ್ದಾನೆ. ಶುಕ್ರವಾರ ರಾತ್ರಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

Share Post