ತಮಿಳುನಾಡಿಗೆ ನೀರು ಹರಿಸುವ ವಿಚಾರ; ಸೆ.18ಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತುರ್ತು ಸಭೆ
ನವದೆಹಲಿ; ಕಾವೇರಿ ನೀರು ನಿಯಂತ್ರಣ ಸಮಿತಿ ಮತ್ತೆ 15 ದಿನಗಳ ಕಾಲ ತಮಿಳುನಾಡಿಗೆ ದಿನವೂ 5 ಸಾವಿರ ಕ್ಯೂಸೆಕ್ ನೀರು ಬಿಡಬೇಕೆಂದು ಕರ್ನಾಟಕಕ್ಕೆ ಸೂಚನೆ ಕೊಟ್ಟಿತ್ತು. ಆದ್ರೆ ಕೆಆರ್‌ಎಸ್‌ನಲ್ಲಿ ನೀರಿಲ್ಲದ ಕಾರಣ ನೀರು ಹರಿಸೋದಕ್ಕೆ ಆಗೋದಿಲ್ಲ ಎಂದು ಕರ್ನಾಟಕ ಹೇಳಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸೆ.18 ರಂದು ತುರ್ತು ಸಭೆ ಕರೆದಿದೆ.
ಕಾವೇರಿ ವಿಚಾರದಲ್ಲಿ ಮಧ್ಯಪ್ರವೇಶ ಮಾಡುವಂತೆ ಸಿಎಂ ಸಿದ್ದರಾಮಯ್ಯ, ಕೇಂದ್ರ ಜಲ ಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್‌ಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಈ ತುರ್ತು ಸಭೆ ಕರೆಯಲಾಗಿದೆ. ಪ್ರಾಧಿಕಾರದ ಅಧ್ಯಕ್ಷ ಎಸ್.ಕೆ. ಹಲ್ದಾರ್ ನೇತೃತ್ವದಲ್ಲಿ ಸಭೆ ನಡೆಯಲಿದೆ. ಕಾವೇರಿ ನದಿ ನೀರು ಅಚ್ಚುಕಟ್ಟು ಪ್ರದೇಶದ ಎಲ್ಲ ರಾಜ್ಯದ ಪ್ರತಿನಿಧಿಗಳು ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಪ್ರಾಧಿಕಾರದ ಸಭೆಯಲ್ಲಿ ನೀರು ನಿಯಂತ್ರಣ ಸಮಿತಿಯ ಆದೇಶವನ್ನು ಕರ್ನಾಟಕ ಪ್ರಶ್ನಿಸಲಿದೆ.