National

ಭದ್ರಾ ಯೋಜನೆ ರಾಷ್ಟ್ರೀಯ ಯೋಜನೆಯಾಗಿ ಪರಿಗಣಿಸಲು ಮನವಿ

ನವದೆಹಲಿ; ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಪರಿಗಣಿಸುವ ಪ್ರಸ್ತಾವನೆಗೆ ಅನುಮೋದನೆ ನೀಡುವಂತೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿದ ಸಚಿವ ಗೋವಿಂದ ಕಾರಜೋಳ ಅವರು, ಭದ್ರಾ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಪರಿಗಣಿಸಲು ಮನವಿ ಮಾಡಿದರು. ಇದಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಒಪ್ಪಿಗೆ ಸೂಚಿಸಿದದಾರೆ ಎಂದು ತಿಳಿದುಬಂದಿದೆ.

Share Post