ಅಕ್ಷರಧಾಮಕ್ಕೆ ಭೇಟಿ ನೀಡಿದ ರಿಷಿ ಸುನಕ್ ದಂಪತಿ
ನವದೆಹಲಿ; ಜಿ-20 ಶೃಂಗಸಭೆಗಾಗಿ ದೆಹಲಿಗೆ ಬಂದಿರುವ ಬ್ರಿಟನ್ ಪ್ರಧಾನಿ ರಿಷಿ ಸುನಕ್ ದಂಪತಿ ದೇಗುಲಗಳಿಗೆ ಭೇಟಿ ನೀಡುತ್ತಿದ್ದಾರೆ. ಇಂದು ಬೆಳಗ್ಗೆ ರಿಷಿ ಸುನಕ್ ದಂಪತಿ ಅಕ್ಷರಧಾಮಕ್ಕೆ ಭೇಟಿ ಕೊಟ್ಟಿದ್ದರು. ಸುಮಾರು 45 ನಿಮಿಷಕ್ಕೂ ಹೆಚ್ಚು ಕಾಲ ದೇಗುಲದಲ್ಲೇ ಕಾಲ ಕಳೆದರು.
ರಿಷಿ ಸುನಕ್ ಭೇಟಿ ಹಿನ್ನೆಲೆಯಲ್ಲಿ ಅಕ್ಷರಧಾಮಕ್ಕೆ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು. ಬ್ಯಾರಿಕೇಡ್ ಗಳನ್ನು ಹಾಕಿ ಭದ್ರತೆ ಅಳವಡಿಸಲಾಗಿತ್ತು.