ನದಿ ಜೋಡಣೆ: ರಾಜ್ಯಕ್ಕೆ ಸಮರ್ಪಕ ಪಾಲು ದೊರೆಯಬೇಕು: ಬೊಮ್ಮಾಯಿ
ದೆಹಲಿ: ನದಿ ಜೋಡಣೆ ವಿಚಾರದಲ್ಲಿ ಕರ್ನಾಟಕಕ್ಕೆ ಸಮರ್ಪಕ ಪಾಲು ದೊರೆಯಬೇಕು ಎಂದು ದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ರು. ನಮ್ಮ ನದಿ ಪಾತ್ರದಲ್ಲಿ ಉತ್ಪಾದನೆಯಾಗುವ ನೀರು, ನಮ್ಮ ಅಗತ್ಯ ಹಾಗೂ ಈಕ್ವಿಟಿ ಆಧರಿಸಿ ಪಾಲು ನಿರ್ಧಾರವಾಗಬೇಕೆನ್ನುವುದು ನಮ್ಮ ನಿಲುವು. ಡಿಪಿಆರ್ ಅಂತಿಮಗೊಳಿಸುವ ಮುನ್ನ ಎಲ್ಲಾ ರಾಜ್ಯಗಳನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಕೂಡ ಹೇಳಲಾಗಿದೆ. ಕರ್ನಾಟಕ್ಕೆ ನ್ಯಾಯಸಮ್ಮತವಾದ ಪಾಲನ್ನು ಪಡೆದುಕೊಳ್ಳಲು ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಜೀವನದಿಗಳಾಗಿರುವ ಕೃಷ್ಣ ಮತ್ತು ಕಾವೇರಿ ಜಲಾನಯನ ಪ್ರದೇಶಗಳ ಪ್ರಶ್ನೆಯಾಗಿರುವುದರಿಂದ ಈ ಬಗ್ಗೆ ನಮ್ಮ ನಿಲುವನ್ನು ಸ್ಪಷ್ಟಪಡಿಸಲಾಗಿದೆ. ಈ ಬಗ್ಗೆ ಯಾವುದೇ ರಾಜಿ ಇಲ್ಲ ಎಂದ್ರು.
ಮಹಾನದಿ, ಗೋದಾವರಿ, ಕೃಷ್ಣ, ಕಾವೇರಿ, ಪಾಲಾರ್, ಪೆನ್ನಾರ್, ನದಿ ಜೋಡಣೆ ಹಿಮಾಲಯ ಹಾಗೂ ಪೆನೆಸ್ಯುಲಾರ್ ಭಾಗದ ಪ್ರಮುಖ ನದಿಜೋಡಣೆ ಯೋಜನೆಗಳಿಗೆ ಸಂಬಂಧಿಸಿದಂತೆ ನಮ್ಮ ನಿಲುವಿನ ಬಗ್ಗೆ ನಮಗೆ ಸ್ಪಷ್ಟತೆ ಇದೆ. ಆ ನಿಲುವಿಗೆ ನಾವು ಬದ್ಧರಾಗಿದ್ದೇವೆ ಎಂದರು.