ಶಿವಸೇನೆ ನಾಯಕ ಸಂಜಯ್ ರಾವುತ್ಗೆ ಇಡಿ ಸಮನ್ಸ್..!
ಮುಂಬೈ; ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದೆ. ಈ ನಡುವೆ ಸಿಎಂ ಉದ್ಧವ್ ಠಾಕ್ರೆ ಪರ ನಿಂತಿರುವ ಶಿವಸೇನೆ ಹಿರಿಯ ನಾಯಕ ಸಂಜಯ್ ರಾವುತ್ಗೆ ಜಾರಿ ನಿರ್ದೇಶನಾಲಯ ಶಾಕ್ ನೀಡಿದೆ. ನಾಳೆ ವಿಚಾರಣೆಗೆ ಹಾಜರಾಗುವಂತೆ ಸಂಜಯ್ ರಾವುತ್ಗೆ ಇಡಿ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದಾರೆ.
ಪ್ರವೀಣ್ ರಾವತ್ ಮತ್ತು ಪತ್ರಾ ಚಾಲ್ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಜಯ್ ರಾವತ್ ಅವರಿಗೆ ಇಡಿ ಸಮನ್ಸ್ ನೀಡಿದೆ. ಅವರ ಕೆಲವು ಆಸ್ತಿಗಳನ್ನು ಇಡಿ ಈ ಹಿಂದೆ ಜಪ್ತಿ ಮಾಡಿತ್ತು