National

ಸಂತೋಷ್‌ ಆತ್ಮಹತ್ಯೆ ಪ್ರಕರಣ; ಅಮಿತ್‌ ಷಾ ನಿವಾಸಕ್ಕೆ ಯುವ ಕಾಂಗ್ರೆಸ್‌ ಮುತ್ತಿಗೆ

ದೆಹಲಿ: ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ದೆಹಲಿಯಲ್ಲಿ ಪ್ರತಿಭಟನೆ ನಡೆಸಿದರು. ಕೇಂದ್ರ ಗೃಹ ಸಚಿವ ಅಮಿತ್‌ ಷಾ ನಿವಾಸಕ್ಕೆ ಮುತ್ತಿಗೆ ಹಾಕಿದ ಯುವ ಕಾಂಗ್ರೆಸ್‌ ಕಾರ್ಯಕರ್ತರು, ಸೂಟ್‌ ಕೇಸ್‌ ಪ್ರದರ್ಶಿಸಿ, ಈಶ್ವರಪ್ಪ ವಿರುದ್ಧ ಘೋಷಣೆ ಕೂಗಿದರು. ಕೂಡಲೇ ಸಚಿವ ಈಶ್ವರಪ್ಪ ಅವರನ್ನು ಬಂಧಿಸಬೇಕೆಂದು ಆಗ್ರಹಿಸಲಾಯಿತು.

 

ಯುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್‌ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಿತು. ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪ್ರತಿಭಟನಾಕಾರರು, ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

 

 

Share Post