National

ಸಂತೂರ್ ವಾದಕ ಭಜನ್ ಸೊಪೋರಿ ನಿಧನ

ನವದೆಹಲಿ; ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಸಂತೂರ್ ವಾದಕ ಭಜನ್ ಸೊಪೋರಿ (73) ಗುರುಗ್ರಾಮ್‌ನ ಫೋರ್ಟಿಸ್‌  ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

2021ರ ಜೂನ್‌ ತಿಂಗಳಲ್ಲಿ ಸೊಪೋರಿ ಅವರಿಗೆ ಕರುಳಿನ ಕ್ಯಾನ್ಸರ್ ಪತ್ತೆಯಾಗಿತ್ತು. ಕೆಲ ದಿನಗಳ ಹಿಂದೆ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಕಳೆದ ತಿಂಗಳಲ್ಲಿ ಇಮ್ಯುನೋ ಥೆರಪಿಗಾಗಿ ಗುರುಗ್ರಾಮ್‌ನ ಫೋರ್ಟಿಸ್‌ ಆಸ್ಪತ್ರೆಗೆ ದಾಖಲಿಸಲಾಗುತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ.

ಭಜನ್ ಸೊಪೋರಿ ವಾಷಿಂಗ್ಟನ್ ವಿಶ್ವವಿದ್ಯಾಲಯದಿಂದ ಪಾಶ್ಚಿಮಾತ್ಯ ಶಾಸ್ತ್ರೀಯ ಸಂಗೀತವನ್ನು ಮತ್ತು ಅವರ ತಂದೆ ಮತ್ತು ತಾತನಿಂದ ಹಿಂದೂಸ್ತಾನಿ ಸಂಗೀತವನ್ನು ಅವರು ಕಲಿತಿದ್ದರು. 2004 ರಲ್ಲಿ ಪದ್ಮಶ್ರೀ, 1992 ರಲ್ಲಿ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಮತ್ತು ಜಮ್ಮು ಮತ್ತು ಕಾಶ್ಮೀರ ರಾಜ್ಯ ಜೀವಮಾನ ಸಾಧನೆ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದರು.

Share Post