ಸಂಸತ್ತಿನಲ್ಲಿ ಭದ್ರತಾಲೋಪ ಹಿನ್ನೆಲೆ; 8 ಸಿಬ್ಬಂದಿ ಅಮಾನತು!
ನವದೆಹಲಿ; ನಿನ್ನೆ ಲೋಕಸಭಾ ಕಲಾಪಕ್ಕೆ ನುಗ್ಗಿ ಇಬ್ಬರು ಯುವಕರು ಆತಂಕ ಸೃಷ್ಟಿಸಿದ್ದರು. ಭದ್ರತಾಲೋಪದಿಂದಲೇ ಇಂತಹ ಘಟನೆ ನಡೆದಿದೆ ಎಂದು ವಿಪಕ್ಷಗಳು ಆರೋಪ ಮಾಡುತ್ತಿವೆ. ಈ ಬೆನ್ನಲ್ಲೇ ಕೇಂದ್ರ ಸರ್ಕಾರ ಎಂಟು ಮಂದಿ ಲೋಕಸಭಾ ಸಿಬ್ಬಂದಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.
ಲೋಕಸಭೆಯಲ್ಲಿ ಕೆಲಸ ಮಾಡುವ ಭದ್ರತಾ ಸಿಬ್ಬಂದಿಯಾದ ರಾಂಪಾಲ್, ಅರವಿಂದ್, ವೀರ್ ದಾಸ್, ಗಣೇಶ್, ಅನಿಲ್, ಪ್ರದೀಪ್, ವಿಮಿತ್ ಮತ್ತು ನರೇಂದ್ರ ಎಂಬುವವರನ್ನು ಲೋಕಸಭಾ ಸೆಕ್ರೇಟರಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಇನ್ನು ನಿನ್ನೆ ಕಲಾಪಕ್ಕೆ ನುಗ್ಗಿದ ಇಬ್ಬರು ಯುವಕರ ವಿರುದ್ಧ UAPA ಕಾಯ್ದೆಯಡಿ ಕೇಸ್ ದಾಖಲು ಮಾಡಲಾಗಿದೆ. ಹೀಗಾಗಿ ಅವರಿಗೆ ಸುಲಭವಾಗಿ ಜಾಮೀನು ಸಿಗುವುದಿಲ್ಲ. ಜೊತೆಗೆ ಹತ್ತು ವರ್ಷದವರೆಗೂ ಶಿಕ್ಷೆಯಾಗುವ ಸಾಧ್ಯತೆ ಇರುತ್ತದೆ.