ಕಾವೇರಿ ವಿಚಾರದಲ್ಲಿ ಪ್ರಧಾನಿ ಮಧ್ಯಸ್ಥಿಕೆಗೆ ಆಗ್ರಹ; ದೆಹಲಿಯಲ್ಲಿ ಕರವೇ ಪ್ರತಿಭಟನೆ
ನವದೆಹಲಿ; ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶ ಮಾಡಬೇಕೆಂದು ಆಗ್ರಹಿಸಿ ದೆಹಲಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸಿದ ನಾರಾಯಣಗೌಡ ನೇತೃತ್ವದ ನೂರಾರು ಕರವೇ ಕಾರ್ಯಕರ್ತರು, ಮಳೆ ಕೊರತೆ ವರ್ಷದಲ್ಲಿ ನೀರು ಹಂಚಿಕೆಗೆ ಸಂಕಷ್ಟ ಸೂತ್ರ ರಚಿಸಬೇಕು. ಕಾವೇರಿ ಕಣಿವೆಯ 4 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಚರ್ಚಿಸಿ ಮೇಕೆದಾಟು ಯೋಜನೆಗೆ ಅನುಮತಿ ನೀಡಬೇಕು ಎಂದು ಆಗ್ರಹ ಮಾಡಿದರು.
ಪ್ರತಿಭಟನೆಗೂ ಮುನ್ನ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸದಲ್ಲಿ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಕೂಡಾ ಭಾಗಿಯಾಗಿದ್ದರು. ಕರ್ನಾಟಕ – ತಮಿಳುನಾಡು ರಾಜ್ಯಗಳು ಒಟ್ಟಾಗಿ ಬಂದಲ್ಲಿ ಮೇಕೆದಾಟು ಯೋಜನೆಗೆ ಅನುಮತಿ ಭರವಸೆ ನೀಡಿದರು.