National

ಸುಪ್ರೀಂಕೋರ್ಟ್‌ನಲ್ಲೂ ರಾಜ್ಯಕ್ಕೆ ಹಿನ್ನಡೆ; ಪ್ರತಿದಿನ 5 ಸಾವಿರ ಕ್ಯೂಸೆಕ್‌ ನೀರು ಹರಿಸಲು ಆದೇಶ

ನವದೆಹಲಿ; ಸುಪ್ರೀಂಕೋರ್ಟ್‌ನಲ್ಲೂ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಕೆಆರ್‌ಎಸ್‌ನಿಂದ ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್‌ ನೀರು ಹರಿಸುವಂತೆ ಸುಪ್ರೀಂ ಕೋರ್ಟ್‌ ಸೂಚನೆ ನೀಡಿದೆ. ನ್ಯಾ ಗವಾಯಿ ನೇತೃತ್ವದ ತ್ರಿಸದಸ್ಯಪೀಠ ಆದೇಶ ನೀಡಿದ್ದು, ರಾಜ್ಯಕ್ಕೆ ನುಂಗಲಾರದ ತುತ್ತಾಗಿದೆ.

ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಮತ್ತೆ ಹದಿನೈದು ದಿನ ಪ್ರತಿದಿನ 5 ಸಾವಿರ ಕ್ಯೂಸೆಕ್‌ ನೀರು ಹರಿಸುವಂತೆ ಸೂಚನೆ ನೀಡಿತ್ತು. ಆದ್ರೆ ರಾಜ್ಯ ಜಲಾಶಯಗಳಲ್ಲಿ ನೀರಿಲ್ಲದ ಕಾರಣ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಟ್ಟಿರಲಿಲ್ಲ. ಹೀಗಾಗಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್‌ ಮೊರೆಹೋಗಿತ್ತು. ಎರಡೂ ಕಡೆ ವಾದ ಆಲಿಸಿದ ಸುಪ್ರೀಂ ಕೋರ್ಟ್‌, ತಮಿಳುನಾಡಿಗೆ ನೀರುಬಿಡುವಂತೆ ಆದೇಶ ನೀಡಿದೆ.

ಕಾವೇರಿ ನಿಯಂತ್ರಣ ಆಯೋಗ ಮತ್ತು ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶಗಳು ಮತ್ತು ಶಿಫಾರಸುಗಳನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಲಾಗುವುದಿಲ್ಲ. ಎರಡು ಸಮಿತಿಗಳ ಆದೇಶವನ್ನು ಒಪ್ಪಬೇಕಾಗುತ್ತೆ. ಎರಡು ಸಮಿತಿಗಳ ಆದೇಶವನ್ನು ಕರ್ನಾಟಕ ಪಾಲಿಸಬೇಕು, ಹೀಗಾಗಿ ಕರ್ನಾಟಕ ನೀರು ಹರಿಸಲೇಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ.

 

Share Post