National

ಚೆನ್ನೈನಲ್ಲಿ ಭಾರಿ ಮಳೆ; ಇನ್ನೂ 3ದಿನ ವರುಣನ ಕಾಟ..!

ಚೆನ್ನೈ: ತಮಿಳುನಾಡಿನಲ್ಲಿ ಅಕಾಲಿಕ ಮಳೆ ಸುರಿದಿದೆ. ಚಳಿಗಾಲ ಬಂದರೂ ಮಳೆಯ ಹಾವಳಿ ನಿಲ್ಲುತ್ತಿಲ್ಲ. ಕಳೆದ ರಾತ್ರಿ ಚೆನ್ನೈನ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ. ಎರಡು ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದ್ದು, ರಸ್ತೆಗಳು, ತಗ್ಗು ಪ್ರದೇಶಗಳು ಜಲಾವೃತವಾಗಿದ್ದವು.

ಎಂಸಿಆರ್‌ ನಗರದಲ್ಲಿ ಇಪ್ಪತ್ತು ಸೆಂಟಿಮೀಟರ್‌ನಷ್ಟು ಮಳೆಯಾಗಿದೆ ಎಂದು ತಿಳಿದುಬಂದಿದೆ. ಇನ್ನೂ ಮೂರು ದಿನ ಭಾರಿ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವು ಭಾಗಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಚೆನ್ನೈ, ಕಾಂಚಿಪುರಂ, ಚೆಂಗಲ್‌ಪಟ್ಟು ಹಾಗೂ ತಿರುವಾರೂರಿನಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದ್ದು, ಜನರಿಗೆ ಎಚ್ಚರಿಕೆಯಿಂದಿರುವಂತೆ ಸೂಚನೆ ನೀಡಲಾಗಿದೆ.

ಇನ್ನು ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಚೆನ್ನೈನಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

 

Share Post