NationalPolitics

ಕೋರ್ಟ್‌ ಮೆಟ್ಟಿಲೇರಿದ ಮಹಾ ರಾಜಕೀಯ ಬಿಕ್ಕಟ್ಟು; ಇಂದು ವಿಚಾರಣೆ

ಮುಂಬೈ; ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು ಸಂಬಂಧ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ಇಂದು ಸುಪ್ರೀಂಕೋರ್ಟ್ ನಲ್ಲಿ ನಡೆಯಲಿದೆ. ಬಂಡಾಯ ಶಾಸಕರ ಗುಂಪು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದು, ಇಂದು ಬೆಳಗ್ಗೆ 10.30ಕ್ಕೆ ಸುಪ್ರೀಂಕೋರ್ಟ್‌ ಇದರ ವಿಚಾರಣೆ ನಡೆಸಲಿದೆ.

16 ಬಂಡಾಯ ಶಾಸಕರಿಗೆ ಅನರ್ಹತೆ ಮತ್ತು  ಏಕನಾಥ್ ಶಿಂದೆ ವಿರುದ್ಧ ಕ್ರಮಕ್ಕೆ ವಿಧಾನಸಭೆ ಉಪ ಸ್ಪೀಕರ್ ನರಹರಿ ಜಿರ್ವಾಲ್ ಅವರು ನೋಟಿಸ್ ಕಳುಹಿಸಿರುವುದನ್ನು ಪ್ರಶ್ನಿಸಿ ಶಿಂದೆ ಬಣ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.  ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೆಬಿ ಪರ್ದಿವಾಲಾ ಅವರ ಪೀಠವು ಪ್ರಕರಣದ ವಿಚಾರಣೆ ನಡೆಸಲಿದೆ. ಹಿರಿಯ ವಕೀಲ ಹರೀಶ್ ಸಾಳ್ವೆ ಅವರು ಏಕನಾಥ್ ಶಿಂಧೆ ಮತ್ತು ಹಿರಿಯ ವಕೀಲ ಕಪಿಲ್ ಸಿಬಲ್ ಮಹಾವಿಕಾಸ್ ಅಘಾಡಿಯನ್ನು ಪ್ರತಿನಿಧಿಸಲಿದ್ದಾರೆ.

   ಶಿಂದೆ ಬಂಡಾಯ ಸಾರಿರುವ ಹಿನ್ನೆಲೆಯಲ್ಲಿ ಅವರನ್ನು ಶಿವಸೇನೆಯ ಶಾಸಕಾಂಗ ಪಕ್ಷದ ನಾಯಕನ ಸ್ಥಾನದಿಂದ ವಜಾಗೊಳಿಸಿ, ಈ ಸ್ಥಾನಕ್ಕೆ ಆಜಯ್​ ಚೌಧರಿ ಅವರನ್ನು ನೇಮಿಸಲಾಗಿದೆ. ನರಹರಿ ಜಿರ್ವಾಲ್ ಅವರು 16 ಬಂಡಾಯ ಶಾಸಕರಿಗೆ ನೋಟಿಸ್ ಜಾರಿ ಮಾಡಿದ್ದು, ಇಂದು ಸಂಜೆ ಐದು ಗಂಟೆಯೊಳಗೆ ಉತ್ತರ ಸಲ್ಲಿಸುವಂತೆ ಸೂಚಿಸಲಾಗಿದೆ. ಈ ವಿಷಯದ ವಿರುದ್ಧ ಶಿಂದೆ ಗುಂಪು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದೆ.

 

Share Post