CrimeNational

ಸಿಧು ಮೂಸೆವಾಲಾಗೆ ಗುಂಡು ಹಾರಿಸಿದ್ದ ಆರೋಪ ಬಂಧನ

ನವದೆಹಲಿ; ಪಂಜಾಬ್‌ನ ಖ್ಯಾತ ಗಾಯಕ ಹಾಗೂ ರಾಜಕಾರಣಿ ಸಿಧು ಮೂಸೆವಾಲಾ ಹಂತಕನನ್ನು ಬಂಧಿಸಲಾಗಿದೆ. ಇಂದು ಬೆಳಗ್ಗೆ ಸಿಧುಗೆ ಗುಂಡಿಕ್ಕಿ ಕೊಂದ ಆರೋಪಿಯನ್ನು ದೆಹಲಿ ಪೊಲೀಸರ ವಿಶೇಷ ತಂಡ ಬಂಧಿಸಿದೆ.

ಸೋಮವಾರ ದೆಹಲಿ ಪೊಲೀಸರ ತಂಡ ಲಾರೆನ್ಸ್ ಬಿಷ್ಣೋಯ್ ಗೋಲ್ಡಿ ಬ್ರಾರ್ ಗ್ಯಾಂಗ್‌ಗೆ ಸೇರಿದ ಇಬ್ಬರು ದರೋಡೆಕೋರರನ್ನು ಬಂಧಿಸಲಾಗಿದೆ. ಇಬ್ಬರ ಪೈಕಿ ಅಂಕಿತ್ ಸಿರ್ಸಾ, ಸಿಧು ಮೂಸೆವಾಲಾ ಹತ್ಯೆಯಲ್ಲಿ ಭಾಗಿಯಾಗಿದ್ದ ಶೂಟರ್‌ಗಳಲ್ಲಿ ಒಬ್ಬ ಎಂದು ತಿಳಿಸಿದ್ದಾರೆ. ಪಂಜಾಬಿ ಗಾಯಕನ ಹತ್ಯೆಯಲ್ಲಿ ಭಾಗಿಯಾಗಿದ್ದಲ್ಲದೇ, ಆರೋಪಿ ಅಂಕಿತ್ ರಾಜಸ್ಥಾನದಲ್ಲಿ ನಡೆದ 2 ಕೊಲೆ ಯತ್ನ ಪ್ರಕರಣಗಳಲ್ಲೂ ಭಾಗಿಯಾಗಿದ್ದ. ಬಂಧಿತ ಇನ್ನೋರ್ವ ಆರೋಪಿ ಸಚಿನ್ ಭಿವಾನಿ, ಸಿಧು ಮೂಸೆವಾಲಾ ಹತ್ಯಾ ಪ್ರಕರಣದಲ್ಲಿ 4 ಜನ ಶೂಟರ್‌ಗಳಿಗೆ ಆಶ್ರಯ ನೀಡಿದ್ದ ಎಂದು ತಿಳಿದುಬಂದಿದೆ.

Share Post