National

ತೆಲಂಗಾಣದ ಪಲ್ನಾಡು ಬಳಿ ಭೀಕರ ಅಪಘಾತ; 6 ಮಂದಿ ದುರ್ಮರಣ

ಹೈದರಾಬಾದ್; ತೆಲಂಗಾಣದ ಪಲ್ನಾಡು ಬಳಿ ಕಳೆದ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಆರು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. 10 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.

ನಿಂತಿದ್ದ ಲಾರಿಗೆ ಟೆಂಪೋ ಟ್ರಾವೆಲರ್‌ ಡಿಕ್ಕಿ ಹೊಡೆದಿದ್ದರಿಂದ ಈ ದುರಂತ ನಡೆದಿದೆ. ಅಪಘಾತದ ಸಮಯದಲ್ಲಿ ಮಿನಿವ್ಯಾನ್‍ನಲ್ಲಿ ಸುಮಾರು 39 ಪ್ರಯಾಣಿಕರು ಇದ್ದರು. ಆ ಟೆಂಪೋ ಟ್ರಾವೆಲರ್‌ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಇನ್ನಿಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಗಾಯಾಳುಗಳನ್ನು ನರಸರಾಯಪೇಟೆಯ ಗುರಜಾಲ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

 

Share Post