CrimeNational

ತನ್ನ 6 ಸಹಸೈನಿಕರ ಮೇಲೆಯೇ ಯೋಧನಿಂದ ಗುಂಡಿನ ದಾಳಿ!

ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್‌ನ ಯೋಧ ತನ್ನ ಸಹ ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ಘಟನೆಯಲ್ಲಿ ಆರು ಯೋಧರು ಗಾಯಗೊಂಡಿದ್ದಾರೆ ಎಂದು ಮಣಿಪುರ ಪೊಲೀಸರು ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿದುಬಂದಿದೆ.

ಭಾರತ ಮತ್ತು ಮ್ಯಾನ್ಮಾರ್ ಗಡಿಯಲ್ಲಿ ಕೆಲಸ ಮಾಡುತ್ತಿದ್ದ ಅಸ್ಸಾಂ ರೈಫಲ್ಸ್ ನ ಯೋಧ ದಕ್ಷಿಣ ಮಣಿಪುರದಲ್ಲಿ ಗುಂಡಿನ ದಾಳಿ ನಡೆಸಿದ್ದಾನೆ. ಘಟನೆಯಲ್ಲಿ ಆರು ಸಹ ಸೈನಿಕರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಯಾರೂ ಮಣಿಪುರದವರಲ್ಲ. ಗುಂಡಿನ ದಾಳಿ ನಡೆಸಿದ ಯೋಧ ನಂತರ ತಾನೂ ಗುಂಡು ಹಾರಿಸಿಕೊಂಡಿದ್ದಾನೆ. ಗಾಯಗೊಂಡವರೆಲ್ಲರೂ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಲ್ಲರ ಆರೋಗ್ಯ ಸ್ಥಿರವಾಗಿದೆ,” ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಘಟನೆಯನ್ನು ಮಣಿಪುರ ಹಿಂಸಾಚಾರದೊಂದಿಗೆ ಜೋಡಿಸಬೇಡಿ ಎಂದು ಪೊಲೀಸರು ಕೇಳಿಕೊಂಡಿದ್ದಾರೆ.

Share Post