NationalPolitics

ಖರ್ಗೆ ಯಂಗ್‌ ಇಂಡಿಯಾ ಸಿಯೊ; ತನಿಖೆಗೆ ಸಹಕರಿಸಲೇಬೇಕು; ಪ್ರಲ್ಹಾದ್‌ ಜೋಶಿ

ನವದೆಹಲಿ; ಮಲ್ಲಿಕಾರ್ಜುನ ಖರ್ಗೆ ಅವರು ಯಂಗ್ ಇಂಡಿಯಾ ಕಂಪನಿಯ ಸಿಇಒ ಆಗಿದ್ದಾರೆ. ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಈ ಕಂಪನಿಯದ್ದು ಪ್ರಮುಖ ಪಾತ್ರ ಇದೆ. ಹೀಗಾಗಿ ಮಲ್ಲಿಕಾರ್ಜುನ ಖರ್ಗೆ ಅವರನ್ನ ಇಡಿ ತನಿಖೆಗೆ ಒಳಪಡಿಸಿದೆ. ಮಲ್ಲಿಕಾರ್ಜುನ ಖರ್ಗೆ ಅವರು ಇಡಿ ತನಿಖೆಗೆ ಸಹಕರಿಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹೇಳಿದ್ದಾರೆ. ಸಂಸತ್ತಿನ ಮುಂಗಾರು ಅಧಿವೇಶನ ಕಲಾಪದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಅಧಿವೇಶನ ಸಂದರ್ಭದಲ್ಲಿ ಜಾರಿ ನಿರ್ದೇಶನಾಲಯ ಸೋನಿಯಾ ಗಾಂಧಿ ಅವರನ್ನು ವಿಚಾರಣೆಗೆ ಕರೆದರೆ, ನಾವು ಕಲಾಪಗಳಲ್ಲಿ ಹೇಗೆ ಪಾಲ್ಗೊಳ್ಳಬೇಕು ಪ್ರಶ್ನಿಸಿದರು.

ಖರ್ಗೆ ಪ್ರಶ್ನೆಗೆ ಉತ್ತರಿಸಿದ ಪ್ರಲ್ಹಾದ್‌ ಜೋಶಿ, ಅಧಿವೇಶನ ಇಲ್ಲದ ಸಂದರ್ಭಗಳಲ್ಲಿ ಸಹ ಕಾಂಗ್ರೆಸ್ ನಾಯಕರು ಇಡಿ ತನಿಖೆಗೆ ಸಹಕರಿಸಿಲ್ಲ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಹರಿಹಾಯ್ದರು. ಅಧಿವೇಶನ ನಡೆಯುವಾಗ ಇಡಿ ಸಮನ್ಸ ನೀಡಿದರೆ ಹೇಗೆ? ಎಂದು ಕೇಳುವ ಮಲ್ಲಿಕಾರ್ಜುನ ಖರ್ಗೆ ಅವರು, ಅಧಿವೇಶನ ಇಲ್ಲದ ವೇಳೆ ತನಿಖೆಗೆ ಎಷ್ಟು ಸಹಕಾರ ನೀಡಿದ್ದೀರಾ? ಸೋನಿಯಾ ಗಾಂಧಿಗೆ ಸಮನ್ಸ್ ನೀಡಿದ ವೇಳೇ ಸದನದ ಕಲಾಪಕ್ಕೆ ಅಡ್ಡಿಪಡಿಸಿ, ಸದನ ನಡೆಯದಂತೆ ಮಾಡಿದವರು ಕಾಂಗ್ರೆಸ್ ನಾಯಕರು. ಕಲಾಪ ನಡೆಯಲು ಖರ್ಗೆ ಅವರು ಎಷ್ಟು ಸಹಕಾರ ನೀಡಿದ್ದರೆ ಆ ಬಗ್ಗೆ ವಿವರಿಸಲಿ ಎಂದು ಸಚಿವ ಪ್ರಲ್ಹಾದ್‌ ಜೋಸಿ ಹೇಳಿದರು.

Share Post