ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿದ ರಾಜ್ಯದ ನಿಯೋಗ
ನವದೆಹಲಿ; ಒಂದು ಕಡೆ ಸುಪ್ರೀಂಕೋರ್ಟ್‌ನಲ್ಲಿ ಕೂಡಾ ರಾಜ್ಯಕ್ಕೆ ಹಿನ್ನೆಡೆಯಾಗಿದೆ. ಸುಪ್ರೀಂ ಕೋರ್ಟ್ ಕಾವೇರಿ ನದಿ ನೀರು ಹಂಚಿಕೆ ಪ್ರಾಧಿಕಾರ ನೀಡಿರುವ ಆದೇಶವನ್ನೇ ಎತ್ತಿಹಿಡಿದಿದೆ. ಇದರಿಂದಾಗಿ ತಮಿಳುನಾಡಿಗೆ ನೀರು ಬಿಡಲೇಬೇಕಾದ ಅನಿವಾರ್ಯತೆ ಎದುರಾಗಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ನಿಯೋಗ ಇಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ರಾಜ್ಯದ ಪರಿಸ್ಥಿತಿ ಬಗ್ಗೆ ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು. ಇಂದಿನ ಕಾವೇರಿ ನೀರಿನ ಮಟ್ಟ ಹಾಗೂ ಮುಂದೆ ಎದುರಾಗಲಿರುವ ನೀರಿನ ಸಮಸ್ಯೆ ಬಗ್ಗೆಯೂ ಸಚಿವರಿಗೆ ವಿವರಿಸಿದ್ದಾರೆ. ಅನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವರಿಗೆ ರಾಜ್ಯದ ವಾಸ್ತವಾಂಶ ತಿಳಿಸಿದ್ದೇವೆ. CWMA ಮಾಡಿದ ಆದೇಶದ ಬಗ್ಗೆಯೂ ವಿವರಣೆ ನೀಡಿದ್ದೇವೆ ಎಂದು ಹೇಳಿದ್ದಾರೆ.