National

HIJAB CASE: ಮೇಲ್ಮನವಿ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್‌ ನಕಾರ

ನವದೆಹಲಿ: ಹಿಜಾಬ್‌ ವಿಚಾರವಾಗಿ ಕರ್ನಾಟಕ ಹೈಕೋರ್ಟ್‌ ನೀಡಿರುವ ಮಧ್ಯಂತರ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ಕರ್ನಾಟಕ ಹೈಕೋರ್ಟ್‌ ಈ ಸಂಬಂಧ ವಿಚಾರಣೆ ನಡೆಸುತ್ತಿದೆ. ಕರ್ನಾಟಕ ಹೈಕೋರ್ಟ್‌ ಇನ್ನೂ ತೀರ್ಪೇ ನೀಡಿಲ್ಲ. ಆಗಲೇ ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸಲು ಆಗುವುದಿಲ್ಲ. ವಿಚಾರಣೆ ನಡೆಸುವುದಕ್ಕೆ ಇದು ಸರಿಯಾದ ಸಮಯವಲ್ಲ ಎಂದು ಸುಪ್ರೀಂ ಕೋರ್ಟ್‌ ಮುಖ್ಯನ್ಯಾಯಮೂರ್ತಿ ಖಡಕ್‌ ಆಗಿ ಹೇಳಿದ್ದಾರೆ.

ಕಾಲೇಜಿನಲ್ಲಿ ಹಿಜಾಬ್‌ ಧರಿಸುವ ವಿಚಾರವಾಗಿ ನಿನ್ನೆ ಹೈಕೋರ್ಟ್‌ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿತು. ಎರಡೂ ವಾದಗಳನ್ನು ಆಲಿಸಿದ ನಂತರ ವಿಚಾರಣೆಯಲ್ಲಿ ಸೋಮವಾರಕ್ಕೆ ಮುಂದೂಡಲಾಯಿತು. ಈ ನಡುವೆ ನ್ಯಾಯಮೂರ್ತಿಗಳು ತೀರ್ಪು ಬರುವವರೆಗೆ ಕಾಲೇಜುಗಳಲ್ಲಿ ಧಾರ್ಮಿಕ ಸಂಕೇತಗಳಿಗೆ ಪ್ರವೇಶವಿಲ್ಲ ಎಂದು ಹೇಳಿದ್ದರು. ಈ ಮೌಖಿಕ ಆದೇಶ ಪ್ರಶ್ನಿಸಿ, ಸುಪ್ರೀಂ ಕೋರ್ಟ್‌ ಮೊರೆ ಹೋಗಲಾಗಿತ್ತು. ಆದ್ರೆ ಸುಪ್ರೀಂ ಕೋರ್ಟ್‌ ಈ ಬಗ್ಗೆ ವಿಚಾರಣೆ ನಡೆಸಲು ನಿರಾಕರಿಸಿದೆ.

 

 

 

Share Post