National

ಲಿಖಿಂಪುರ ಖೇರಿ ಹಿಂಸಾಚಾರ ಪ್ರಕರಣ; ಕೇಂದ್ರ ಸಚಿವರ ಪುತ್ರನಿಗೆ ಮತ್ತೆ ಸಂಕಷ್ಟ

ನವದೆಹಲಿ: 2021ರ ಅಕ್ಟೋಬರ್‌ 3 ರಂದು ನಡೆದ ಉತ್ತರ ಪ್ರದೇಶದ ಲಿಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಕೇಂದ್ರ ಸಚಿವ ಅಜಯ್‌ ಕುಮಾರ್‌ ಮಿಶ್ರಾ ಪುತ್ರನಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಪ್ರತಿಭಟನೆ ಮಾಡುತ್ತಿದ್ದ ರೈತರ ಮೇಲೆ ಜೀಪ್‌ ಹತ್ತಿಸಿದ್ದರಿಂದ ನಾಲ್ವರು ರೈತರು ಸೇರಿ ಎಂಟು ಮಂದಿ ಸಾವನ್ನಪ್ಪಿದ್ದರು. ಈ ಜೀಪ್‌ ಕೇಂದ್ರ ಸಚಿವ ಅಜಯ್‌ ಕುಮಾರ್‌ ಮಿಶ್ರಾ ಪುತ್ರನಿಗೆ ಸೇರಿದ್ದು ಎಂದು ಹೇಳಲಾಗಿದ್ದು, ಘಟನೆ ವೇಳೆ ಸಚಿವರ ಪುತ್ರ ಆಶಿಶ್‌ ಮಿಶ್ರಾ ಕೂಡಾ ಜೀಪ್‌ನಲ್ಲಿದ್ದ ಎಂದು ಹೇಳಲಾಗಿದೆ. ಈ ಸಂಬಂಧ ಕೆಳನ್ಯಾಯಾಲಯ ಆರೋಪಿ ಆಶಿಶ್‌ ಮಿಶ್ರಾಗೆ ಜಾಮೀನು ಮಂಜೂರು ಮಾಡಿತ್ತು.

       ಇದನ್ನು ಪ್ರಶ್ನಿಸಿ ಕೆಲ ರೈತರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿ ಸುಪ್ರೀಂಕೋರ್ಟ್‌, ಸಚಿವರ ಪುತ್ರನಿಗೆ ನೀಡಿದ್ದ ಜಾಮೀನನ್ನು ರದ್ದು ಮಾಡಿ ಆದೇಶ ಹೊರಡಿಸಿದೆ.  2022ರ ಫೆಬ್ರುವರಿ 15ರಂದು ಕೇಂದ್ರ ಸಚಿವ ಅಜಯ್​ ಮಿಶ್ರಾ ಅವರ ಪುತ್ರ ಆಶಿಶ್​ ಮಿಶ್ರಾಗೆ ಅಲಹಾಬಾದ್​ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಹೀಗಾಗಿ ಅವರು ಜೈಲಿನಿಂದ ಬಿಡುಗಡೆಯಾಗಿದ್ದರು.

Share Post