ರಾಜ್ಯದಲ್ಲಿ ಹಿಜಾಬ್ ವಿವಾದ; ತುರ್ತು ವಿಚಾರಣೆಗೆ ಮತ್ತೆ ಸುಪ್ರೀಂ ನಿರಾಕರಣೆ
ನವದೆಹಲಿ: ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ಗೆ ಅವಕಾಶವಿಲ್ಲ ಎಂದು ಹೈಕೋರ್ಟ್ ಹೇಳಿರುವುದರಿಂದ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಆದ್ರೆ, ಅರ್ಜಿದಾರರು ತುರ್ತು ವಿಚಾರಣೆಗೆ ದಿನಾಂಕ ನಿಗದಿ ಮಾಡುವಂತೆ ಮನವಿ ಮಾಡಿದ್ದು, ಇದಕ್ಕೆ ಸುಪ್ರೀಂಕೋರ್ಟ್ ನಿರಾಕರಣೆ ಮಾಡಿದೆ. ವಿದ್ಯಾರ್ಥಿನಿಯರು ಪರೀಕ್ಷೆ ಬರೆಯಲು ಕಷ್ಟವಾಗುತ್ತದೆ. ಹೀಗಾಗಿ ಮೇಲ್ಮನವಿ ಅರ್ಜಿಯನ್ನು ತುರ್ತು ವಿಚಾರಣೆಗೊಳಪಡಿಸಬೇಕೆಂದು ಮನವಿ ಮಾಡಲಾಗಿತ್ತು. ಆದ್ರೆ ಇದನ್ನು ಸುಪ್ರೀಂ ಕೋರ್ಟ್ ಎರಡನೇ ಬಾರಿಗೆ ತಳ್ಳಿ ಹಾಕಿದೆ.
ಮಾರ್ಚ್ 16 ರಂದು ಕರ್ನಾಟಕ ಹೈಕೋರ್ಟ್ ಶಾಲಾ–ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸಿ ಆದೇಶ ಹೊರಡಿಸಿತ್ತು. ಈ ಆದೇಶ ಪ್ರಶ್ನಿಸಿ ಉಡುಪಿಯ ಕೆಲ ಮುಸ್ಲಿಂ ವಿದ್ಯಾರ್ಥಿನಿಯರು, ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ತಕ್ಷಣವೇ ತಡೆಯಾಜ್ಞೆ ನೀಡಬೇಕು. ಇಲ್ಲದಿದ್ದರೇ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ತೊಂದರೆ ಆಗುತ್ತದೆ ಎಂದು ಸುಪ್ರೀಂಕೋರ್ಟ್‌ಗೆ ಮೇಲ್ಮನವಿಯನ್ನು ಮಾರ್ಚ್ 17 ರಂದು ಸಲ್ಲಿಸಿದ್ದರು.