National

ರಾಜ್ಯದ ಮೂವರು ಸೇರಿ 9 ಜನರನ್ನು ಹೈಕೋರ್ಟ್​ ನ್ಯಾಯಮೂರ್ತಿಗಳಾಗಿ ನೇಮಿಸಲು ಸುಪ್ರೀಂ ಶಿಫಾರಸು

ನವದೆಹಲಿ; ಕರ್ನಾಟಕದ 7 ನ್ಯಾಯಾಂಗ ಅಧಿಕಾರಿಗಳು ಮತ್ತು ಇಬ್ಬರು ವಕೀಲರಿಗೆ ವಿವಿಧ ಹೈಕೋರ್ಟ್‌ಗಳ ನ್ಯಾಯಮೂರ್ತಿಗಳಾಗಿ ಬಡ್ತಿ ನೀಡಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ. ಕರ್ನಾಟಕದ
ನ್ಯಾಯಾಂಗ ಅಧಿಕಾರಿಗಳಾದ ರಾಮಚಂದ್ರ ದತ್ತಾತ್ರೇ ಹುದ್ದಾರ್ ಮತ್ತು ವೆಂಕಟೇಶ್ ನಾಯ್ಕ್ ಥಾವರ್ಯ ನಾಯ್ಕ್ ಅವರನ್ನು ಕರ್ನಾಟಕ ಹೈಕೋರ್ಟ್​ ನ್ಯಾಯಮೂರ್ತಿಗಳನ್ನಾಗಿ ಮಾಡುವ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ.

ಜನವರಿ 10ರಂದು ನಡೆದ ಸಭೆಯಲ್ಲಿ ಸುಪ್ರೀಂ ಕೋರ್ಟ್ ಕೊಲಿಜಿಯಂ ಮರುಪರಿಶೀಲನೆಯ ಮೇಲೆ ವಕೀಲರಾದ ನಾಗೇಂದ್ರ ರಾಮಚಂದ್ರ ನಾಯ್ಕ್ ಅವರನ್ನು ಕರ್ನಾಟಕ ಹೈಕೋರ್ಟ್‌ನ ನ್ಯಾಯಾಧೀಶರನ್ನಾಗಿ ಮಾಡುವ ತನ್ನ ಹಿಂದಿನ ಶಿಫಾರಸನ್ನು ಪುನರುಚ್ಚರಿಸಲು ನಿರ್ಧರಿಸಿದೆ.

Share Post