National

ಪ್ರಧಾನಿ ಭದ್ರತಾ ಲೋಪ ಕೇಸ್‌; ತನಿಖಾ ತಂಡ ನೇಮಕ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಪಂಜಾಬ್‌ ಭೇಟಿ ವೇಳೆ ಆದ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್‌ ಸ್ವತಂತ್ರ ಸಮಿತಿಯನ್ನು ರಚನೆ ಮಾಡಿದೆ. ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಾಮೂರ್ತಿ ಇಂದು ಮಲ್ಹೋತ್ರ ಈ ತನಿಖಾ ತಂಡದ ನೇತೃತ್ವ ವಹಿಸಲಿದ್ದಾರೆ.

ಘಟನೆ ಸಂಬಂಧಿಸಿದಂತೆ ಪಂಜಾಬ್‌ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳು ಪ್ರತ್ಯೇಕ ತನಿಖಾ ತಂಡಗಳನ್ನು ರಚನೆ ಮಾಡಿದ್ದರು. ಎರಡೂ ತಂಡಗಳು ಸ್ಥಳ ಪರಿಶೀಲನೆ ನಡೆಸಿ, ವರದಿ ತಯಾರಿಸಿದ್ದವು. ಆದರೆ ಸುಪ್ರೀಂ ಕೋರ್ಟ್‌ ಸ್ವತಂತ್ರ ತನಿಖಾ ತಂಡ ರಚನೆ ಮಾಡಬೇಕೆಂದು ಸೂಚಿಸಿತ್ತು.

ಈ ಹಿನ್ನೆಲೆಯಲ್ಲಿ ಸ್ವತಂತ್ರ ತನಿಖಾ ರಚನೆ ಮಾಡಲಾಗಿದೆ. ಈ ತಂಡದಲ್ಲಿ ಇಂದು ಮಲ್ಹೋತ್ರ ಜೊತೆಗೆ ರಾಷ್ಟ್ರೀಯ ತನಿಖಾ ತಂಡದ ಡೈರೆಕ್ಟರ್‌ ಜನರಲ್‌, ಪಂಜಾಬ್‌ ಭದ್ರತಾ ವಿಂಗ್‌ನ ಡೈರೆಕ್ಟರ್‌ ಜನರಲ್‌ ಹಾಗೂ ಪಂಜಾಬ್‌-ಹರಿಯಾಣ ಹೈಕೋರ್ಟ್‌ನ ರಿಜಿಸ್ಟ್ರಾರ್‌ ಜನರಲ್‌ ಅವರು ಸದಸ್ಯರಾಗಿರುತ್ತಾರೆ.

Share Post