ಸುಪ್ರೀಂ – ಮೇಕೆದಾಟು ಅರ್ಜಿ ವಿಚಾರಣೆ ಮುಂದೂಡಿಕೆ
ನವದೆಹಲಿ : ಮೇಕೆದಾಟು ಅಣೆಕಟ್ಟು ನಿರ್ಮಾಣವನ್ನು ವಿರೋಧಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದ್ದ ಅರ್ಜಿಯ ವಿಚಾರಣೆಯನ್ನು ಜನವರಿ 25ರಂದು ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಮುಂದೂಡಿದೆ.
ತಮಿಳುನಾಡು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ನಡೆಯಬೇಕಿತ್ತು. ವಕೀಲರು ಮೇಕೆದಾಟು ಅರ್ಜಿಯನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಬೇಕು ಎಂದು ಮನವಿ ಸಲ್ಲಿಸಿದರು. ವಕೀಲರ ಮನವಿಯನ್ನು ಪುರಸ್ಕರಿಸಿದ ನ್ಯಾಯಲಯವು ಜನವರಿ 25ರಂದು ಮೇಕೆದಾಟು ಪ್ರಕರಣದ ವಿಚಾರಣೆ ನಡೆಸುವುದಾಗಿ ಹೇಳಿದೆ.
ಮೇಕೆದಾಟು ಯೋಜನೆಗೆ ಕೇಂದ್ರ ಒಪ್ಪಿಗೆ ನೀಡಿದ ನಂತರ ತಮಿಳು ನಾಡು ಸರ್ಕಾರ ಯೋಜನೆ ವಿರೋಧಿಸಿ ಅರ್ಜಿ ಸಲ್ಲಿಸಿತ್ತು.