National

ಮೋದಿ ಭೇಟಿಯಾದ ಸ್ಟಾಲಿನ್‌; ಕುತೂಹಲ ಕೆರಳಿಸಿದ ಮಾತುಕತೆ

ನವದೆಹಲಿ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ದೆಹಲಿ ಪ್ರವಾಸದಲ್ಲಿದ್ದು, ಇಂದು ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.
ನಮ್ಮ ರಾಜ್ಯ ನಮ್ಮ ಹಕ್ಕು ವಿಚಾರವಾಗಿ ಅವರು ಚರ್ಚೆ ಮಾಡಿದರು ಎಂದು ತಿಳಿದುಬಂದಿದೆ.  ತಮಿಳುನಾಡು ರಾಜ್ಯಕ್ಕೆ ಬರಬೇಕಾದ ಜಿಎಸ್‌ಟಿ ಪಾಲು, ನೆರೆ ಪರಿಹಾರದಲ್ಲಿ ಬರಬೇಕಾದ ಪಾಲನ್ನು ಶೀಘ್ರವೇ ಬಿಡುಗಡೆ ಮಾಡಬೇಕೆಂದು ಸ್ಟಾಲಿನ್‌ ಪ್ರಧಾನಿ ಬಳಿ ಮನವಿ ಮಾಡಿದ್ದಾರೆ.  ಇದರೊಂದಿಗೆ ಕಾವೇರಿ ನೀರು ಹಂಚಿಕೆ ವಿಚಾರದ ಬಗ್ಗೆಯೂ ಚರ್ಚೆ ನಡೆದಿರುವ ಸಾಧ್ಯತೆ ಇದೆ.

ಶ್ರೀಲಂಕಾದಲ್ಲಿ ಈಗ ಹೆಚ್ಚಿನ ಆರ್ಥಿಕ ಸಮಸ್ಯೆ ಉಂಟಾಗಿದೆ. ಅಲ್ಲಿನ ಜನರಿಗೆ ಅಗತ್ಯ ವಸ್ತುಗಳೂ ಸಿಗುತ್ತಿಲ್ಲ. ಇದರಿಂದ ಅಲ್ಲಿ ನೆಲೆಸಿರುವ ತಮಿಳಿಗರಿಗೆ ತೊಂದರೆ ಆಗುತ್ತಿದೆ. ಇದರಿಂದ ತಕ್ಷಣವೇ ಶ್ರೀಲಂಕಾಗೆ ಆಹಾರ, ವೈದ್ಯಕೀಯ ಸಾಮಗ್ರಿಗಳು, ಅಗತ್ಯ ವಸ್ತುಗಳನ್ನು ಕೂಡಲೇ ಕಳುಹಿಸಿಕೊಡುವ ಕೆಲಸ ಮಾಡಬೇಕು ಎಂದು ಮೋದಿ ಅವರಲ್ಲಿ ಸ್ಟಾಲಿನ್‌ ಮನವಿ ಮಾಡಿದ್ದಾರೆ. ಜೊತೆಗೆ ಶ್ರೀಲಂಕಾ ಸರ್ಕಾರ ತಮಿಳು ಮೀನುಗಾರರನ್ನು ಬಂಧಿಸಿದ್ದು, ಅವರನ್ನು ಬಿಡಿಸುವ ನಿಟ್ಟಿನಲ್ಲಿಯೂ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

 

Share Post