National

ಮಹಿಳಾ ಕ್ರಿಕೆಟ್‌ ತಂಡದ ನಾಯಕಿ ಮಿಥಾಲಿ ನಿವೃತ್ತಿ ಘೋಷಣೆ

ನವದೆಹಲಿ; ಭಾರತ ಮಹಿಳಾ ಕ್ರಿಕೆಟ್‌ ತಂಡದ ನಾಯಕಿ ಮಿಥಾಲಿ ರಾಜ್‌ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ನ ಎಲ್ಲ ಮಾದರಿಗಳಿಗೆ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ ಎರಡು ದಶಕಗಳ ಕ್ರಿಕೆಟ್‌ ವೃತ್ತಿ ಜೀವನಕ್ಕೆ ಅವರು ವಿರಾಮ ಹೇಳಿದ್ದಾರೆ. ಮಿಥಾಲಿ ಅವರು ವಿಶ್ವಕಪ್‌ ಕ್ರಿಕೆಟ್‌ನಲ್ಲಿ ಭಾರತ ತಂಡವನ್ನು 2005 ಮತ್ತು 2017ರಲ್ಲಿ ಫೈನಲ್‌ವರೆಗೂ ಮುನ್ನಡೆಸಿದ್ದರು.

16ನೇ ವಯಸ್ಸಿನಲ್ಲಿ ಮಿಥಾಲಿ ಮೊದಲ ಬಾರಿಗೆ ಭಾರತ ತಂಡದ ಪರವಾಗಿ ಕಣಕ್ಕಿಳಿದಿದ್ದರು. 1999ರಲ್ಲಿ ಐರ್ಲೆಂಡ್‌ ವಿರುದ್ಧ ನಡೆದ ಪಂದ್ಯವು ಅವರ ಮೊದಲ ಅಂತರರಾಷ್ಟ್ರೀಯ ಪಂದ್ಯ ಹಾಗೂ ಈ ವರ್ಷ ಮಾರ್ಚ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಪಂದ್ಯವು ಕೊನೆಯ ಪಂದ್ಯ. ಆ ಪಂದ್ಯದಲ್ಲಿ ಮಿಥಾಲಿ 68 ರನ್‌ ಗಳಿಸಿದ್ದರು.

 

Share Post