ತೆಲಂಗಾಣದಲ್ಲಿ ಬಬಿಜೆಪಿ ಶಾಸಕ ರಾಜಾಸಿಂಗ್ ಅರೆಸ್ಟ್
ಹೈದರಾಬಾದ್; ಪ್ರವಾದಿ ಮಹಮದ್ ಬಗ್ಗೆ ಅವಹೇಳಕಾರಿ ಹೇಳಿಕೆ ನೀಡಿದ್ದ ತೆಲಂಗಾಣದ ಬಿಜೆಪಿ ಶಾಸಕ ಟಿ.ರಾಜಾ ಸಿಂಗ್ ಅವರನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಈ ಕುರಿತಂತೆ ಪ್ರತಿಭಟನೆಗಳು ಜೋರಾದ ಹಿನ್ನೆಲೆಯಲ್ಲಿ ಪೊಲೀಸರು ಶಾಸಕನನ್ನು ಬಂಧಿಸಿದ್ದಾರೆ.
ಬಿಜೆಪಿ ಶಾಸಕ ರಾಜಾಸಿಂಗ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ನಿನ್ನೆ ರಾತ್ರಿ ಹೈದರಾಬಾದ್‌ನಲ್ಲಿ ಭಾರಿ ಪ್ರತಿಭಟನೆ ನಡೆಸಲಾಯಿತು. ಈ ಹಿನ್ನೆಲೆಯಲ್ಲಿ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಕಾನೂನಿನ ಸೆಕ್ಷನ್‌ಗಳ ಅಡಿಯಲ್ಲಿ ಶಾಸಕನನ್ನು ಬಂಧಿಸಲಾಗಿದೆ. ಪ್ರವಾದಿ ಮಹಮದ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ವಿಡಿಯೋ ಒಂದು ವೈರಲ್ ಆಗಿತ್ತು. ಹೀಗಾಗಿ ಬಿಜೆಪಿ ಶಾಸಕನ ವಿರುದ್ಧ ಹೋರಾಟಗಳು ಜೋರಾಗಿದ್ದವು.
ಸಿಂಗ್ ಅವರು ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಅವರನ್ನು ತಕ್ಷಣ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದರು. ತಕ್ಷಣ ಅವರನ್ನು ವಶಕ್ಕೆ ಪಡೆದು ನಂತರ ವಿವಿಧ ಠಾಣೆಗಳಿಗೆ ರವಾನಿಸಲಾಗಿದೆ.