National

ಪುಲ್ವಾಮಾ ಬಳಿ ಎನ್‌ಕೌಂಟರ್‌; ಇಬ್ಬರು ಉಗ್ರರ ಹತ್ಯೆ

ಶ್ರೀನಗರ; ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಸ್ಥಳದಲ್ಲಿ ಭಯೋತ್ಪಾದಕರ ಶೋಧ ಕಾರ್ಯಾಚರಣೆ ಮುಂದುವರೆಸಲಾಗಿದೆ.

     ಭಾನುವಾರ ಪೊಲೀಸರು ಮತ್ತು ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆ ನಡೆಸಿದ್ದರು. ಗುಂಡಿಪೋರಾ ಪ್ರದೇಶವನ್ನು ಸುತ್ತುವರೆಯಲಾಗಿತ್ತು. ಭಯೋತ್ಪಾದಕರು ಅಡಗಿ ಕುಳಿತಿರುವ ಬಗ್ಗೆ ಖಚಿತ ಮಾಹಿತಿಯ ಆಧಾರದ ಮೇಲೆ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸುತ್ತಿವೆ.

Share Post