National

ಆರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ದಕ್ಷಿಣ ಕಾಶ್ಮೀರ: ಇಬ್ಬರು ಸ್ಥಳೀಯ ಉಗ್ರರು ಸೇರಿದಂತೆ 6 ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿರುವ ಘಟನೆ ಜಮ್ಮ-ಕಾಶ್ಮೀರ ಅನಂತ್‌ನಾಗ್‌ ಮತ್ತು ಕುಲ್ಗಾಮ್‌ ಜಿಲ್ಲೆಗಳಲ್ಲಿ ನಡೆದಿದೆ. ಎರಡು ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ಉಗ್ರರನ್ನ ಗುಂಡಿಕ್ಕಿ ಕೊಲ್ಲಲಾಗಿದೆ. ಎನ್‌ಕೌಂಟರ್‌ ಬಗ್ಗೆ ಮಾಹಿತಿ ಪೊಲೀಸರು ನಾಲ್ವರು ಪಾಕಿಸ್ತಾನಿ ಭಯೋತ್ಪಾದಕರಾಗಿದ್ದು, ಇಬ್ಬರು ಸ್ಥಳೀಯ ಉಗ್ರರೆಂದು ತಿಳಿಸಿದ್ದಾರೆ. ಪಾಕಿಸ್ತಾನ್ ಮೂಲದ ಉಗ್ರರ ಗುರುತನ್ನು ಈಗಾಗಲೇ ಪತ್ತೆ ಮಾಡಲಾಗಿದೆ. ಸ್ಥಳೀಯ ಉಗ್ರರ ಪತ್ತೆ ಕಾರ್ಯವೂ ನಡೆದಿದ್ದು, ಜೆಇಎಂ ಸಂಘಟನೆಯೊಂದಿಗೆ ನಂಟು ಹೊಂದಿದ್ದರೆಂಬ ಮಾಹಿತಿ ತಿಳಿದುಬಂದಿದೆ. ಅಲ್ಲದೇ ಇದು ನಮಗೆ ಸಿಕ್ಕ ಅತ್ಯಂತ ದೊಡ್ಡ ಯಶಸ್ಸು ಎಂದು ಕಾಶ್ಮೀರದ ಇನ್ಸ್​​ಪೆಕ್ಟರ್ ವಿಜಯ್ ಕುಮಾರ್ ವ್ಯಾಖ್ಯಾನಿಸಿದ್ದಾರೆ.

ಕುಲ್ಗಾಮ್ ಜಿಲ್ಲೆಯ ಮಿರ್ಹಾಮಾ ಪ್ರದೇಶದಲ್ಲಿ ಭಯೋತ್ಪಾದಕರ ಸುಳಿವು ಲಭ್ಯವಾದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ವೇಲೆ ಅಡಗಿಕೊಂಡಿದ್ದ ಉಗ್ರರು ಭದ್ರತಾ ಪಡೆಯ ಮೇಲೆ ಗುಂಡು ಹಾರಿಸಿದ್ದಾರೆ. ಈ ವೇಳೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಇದರಲ್ಲಿ ಮೂವರು ಉಗ್ರರು ಸಾವನ್ನಪ್ಪಿರುವುದಾಗಿ ಅಧಿಕಾರಿ ತಿಳಿಸಿದ್ದಾರೆ. ಅಣಮತ್‌ನಾಗ್‌ ಜಿಲ್ಲೆಯ ದೂರುವಿನ ನೌಗಾಮ್ ಶಹಾಬಾದ್ ಪ್ರದೇಶದಲ್ಲಿ ನಡೆದ ಗೊಡಿನ ದಾಳಿಯಲ್ಲಿ ಓರ್ವ ಪೊಲೀಸ್‌ ಅಧಿಕಾರಿಗೆ ಗಾಯಗಳಾಗಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ ಎಂದು ಸ್ಥಳೀಯ ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Share Post