National

ನಟಿ ಕಂ ಮಾಡೆಲ್‌ ಶೆರಿನ್‌ ನೇಣಿಗೆ ಶರಣು; ವಿಡಿಯೋ ಕಾಲ್‌ನಲ್ಲಿರುವಾಗಲೇ ಆತ್ಮಹತ್ಯೆ

ನಟಿ ಕಂ ಮಾಡೆಲ್‌ ಶಹಾನಾ ಅನುಮಾನಾಸ್ಪದ ಸಾವಿನ ಬೆನ್ನಲ್ಲೇ ಕೇರಳದಲ್ಲಿ ಮತ್ತೊಬ್ಬ ಮಾಡೆಲ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಟಿ ಕಂ ಮಾಡೆಲ್ ಆಗಿದ್ದ ಲಿಂಗತ್ವ ಅಲ್ಪಸಂಖ್ಯಾತೆ ಶೆರಿನ್ ಕೆಲಿನ ಮ್ಯಾಥೋ ಅವರು ಕೇರಳದ ಚಕ್ಕರಪಂರಬು ಬಳಿಯ ಅಪಾರ್ಟ್ಮೆಂಟ್ ನಲ್ಲಿ ಇಂದು ಶವವಾಗಿ ಪತ್ತೆಯಾಗಿದ್ದಾರೆ.

26 ವರ್ಷದ ಈ ನಟಿ ಫ್ಯಾನ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಡಿಯೋ ಕಾಲ್ ನಲ್ಲಿ ಮಾತನಾಡುತ್ತಲೇ ಈಗೆ ನೇಣಿಗೆ ಶರಣಾಗಿದ್ದಾಳೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಶೆರಿನ್ ಆತ್ಮಹತ್ಯೆ ಮಾಡಿಕೊಂಡ ವಿಷಯವನ್ನು ಅವರ ರೂಮ್ ಮೇಟ್ಸ್ ಖಚಿತ ಪಡಿಸಿದ್ದಾರೆ. ಹಲವು ದಿನಗಳಿಂದ ಶೆರಿನ್ ಡಿಪ್ರೆಶನ್ ಗೆ ಒಳಗಾಗಿದ್ದರು. ತೀವ್ರ ಮಾನಸಿಕ ಒತ್ತಡವೇ ಆತ್ಮಹತ್ಯೆಗೆ ಕಾರಣ ಎಂದು ಹೇಳಲಾಗುತ್ತಿದೆ.

 

Share Post