NationalScience

ಗಗನಯಾನ ಯೋಜನೆ ಪ್ರಾಯೋಗಿಕ ಉಡಾವಣೆ ಯಶಸ್ವಿ

ಶ್ರೀಹರಿಕೋಟಾ; ಇಸ್ರೋ ಮಾನವ ಸಹಿತ ಗಗನಯಾನಕ್ಕೆ ಸಿದ್ಧತೆ ನಡೆಸುತ್ತಿದೆ. ಅದರ ಭಾಗವಾಗಿ ಇಂದು ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಪರೀಕ್ಷಾರ್ಥ ಉಡಾವಣೆ ನಡೆಸಲಾಯಿತು. ಈ ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದೆ.

ಅಂದಹಾಗೆ ಇಂದು ಬೆಳಗ್ಗೆ 8.30ಕ್ಕೆ ಉಡಾವಣೆ ನಿಗದಿಯಾಗಿತ್ತು. ಆದ್ರೆ ಹವಾಮಾನ ವೈಪರಿತ್ಯದ ಹಿನ್ನೆಲೆಯಲ್ಲಿ ಸಮಯವನ್ನು 8.45ಕ್ಕೆ ನಿಗದಿ ಮಾಡಲಾಗಿತ್ತು. ಅನಂತರವೂ ಉಡಾವಣೆ ಮಾಡಲು ಆಗಲಿಲ್ಲ. ಕಾರಣ ಕೊನೆಯ ಕ್ಷಣದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ನಂತರ ತಾಂತ್ರಿಕ ದೋಷ ಸರಿಪಡಿಸಿ ಪ್ರಯೋಗ ನಡೆಸಲಾಗಿದ್ದು, ಪ್ರಯೋಗ ಯಶಸ್ವಿಯಾಗಿದೆ.

ಕ್ರ್ಯೂ ಮಾಡೆಲ್, ಕ್ರ್ಯೂ ಎಸ್ಕೇಪ್​ ಮಾಡೆಲ್​​ ಒಳಗೊಂಡ ರಾಕೆಟ್​ ನಭಕ್ಕೆ ಹಾರಿತ್ತು. ರಾಕೆಟ್​​ನಿಂದ ಬೇರ್ಪಟ್ಟು ಎರಡೂ ಮಾಡೆಲ್​ಗಳು ಪ್ಯಾರಚೂಟ್ ಮೂಲಕ ಭೂಮಿಗೆ ಬಂದಿಳಿದಿವೆ.

Share Post