National

ಜಮ್ಮು-ಕಾಶ್ಮೀರದಲ್ಲಿ ಎನ್‌ಕೌಂಟರ್‌; ಮೂವರು ಉಗ್ರರ ಹತ್ಯೆ

ಶ್ರೀನಗರ; ಕಾಶ್ಮೀರದಲ್ಲಿ ಇಂದು ಎರಡು ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಇದರಿಂದಾಗಿ ಕಳೆದ 24 ಗಂಟೆಗಳಲ್ಲಿ ಒಟ್ಟು ಏಳು ಮಂದಿ ಭಯೋತ್ಪಾದಕರನ್ನು ಹತ್ಯೆ ಮಾಡಿದಂತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಅಲ್ಲದೆ, ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಮತ್ತೊಂದು ಎನ್‌ಕೌಂಟರ್‌ನಲ್ಲಿ ಅಪರಿಚಿತ ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ವಕ್ತಾರರು ಮಾಹಿತಿ ನೀಡಿದ್ದಾರೆ. ಉಗ್ರರು ಅಡಗಿದ್ದಾರೆ ಎಂಬ ಮಾಹಿತಿ ಮೇರೆಗೆ ಪುಲ್ವಾಮಾದ ಚತ್ಪೊರಾದಲ್ಲಿ ಭದ್ರತಾ ಪಡೆಗಳು, ಶೋಧ ಕಾರ್ಯಾಚರಣೆ ಕೈಗೊಂಡಾಗ ಉಗ್ರರು ಮತ್ತು ಭದ್ರತಾಪಡೆಗಳ ಮಧ್ಯೆ ಎನ್‌ಕೌಂಟರ್‌ ನಡೆಯಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

Share Post