National

ಬಾಬ್ರಿ ಮಸೀದಿ ಧ್ವಂಸ ವಾರ್ಷಿಕೋತ್ಸವಕ್ಕೆ ಬಿಗಿ ಭದ್ರತೆ

ಲಕ್ನೋ: ಸೋಮವಾರ ಬಾಬ್ರಿ ಮಸೀದಿ ಧ್ವಂಸ ವಾರ್ಷಿಕೋತ್ಸವದ ಪ್ರಯುಕ್ತ ಉತ್ತರ ಪ್ರದೇಶದ ಅಯೋಧ್ಯೆ ಮತ್ತು ಮಥುರಾದಲ್ಲಿ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ. ಅಯೋಧ್ಯೆಯ ಎಲ್ಲಾ ಆಯಕಟ್ಟಿನ ಸ್ಥಳಗಳಲ್ಲಿ ಸಿವಿಲ್ ಪೋಲೀಸ್, ಪ್ರಾಂತೀಯ ಸಶಸ್ತ್ರ ಕಾನ್ಸ್ಟಾಬ್ಯುಲರಿ (ಪಿಎಸಿ) ಮತ್ತು ಕೇಂದ್ರ ಪಡೆಗಳನ್ನು ನಿಯೋಜಿಸಲಾಗಿದೆ ಎಂದು  ಅಯೋಧ್ಯೆಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಶೈಲೇಶ್ ಪಾಂಡೆ ತಿಳಿಸಿದ್ದಾರೆ.  ನಗರದಲ್ಲಿ ಯಾವುದೇ ಪ್ರತಿಭಟನಾ ಮೆರವಣಿಗೆ ಅಥವಾ ಸಭೆ ನಡೆಯದಂತೆ ಮಥುರಾದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಮಂಗಳವಾರದವರೆಗೆ ಶ್ರೀಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ಮೈದಾನಕ್ಕೆ ಹೊಂದಿಕೊಂಡಿರುವ ರಸ್ತೆಗಳಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಕೇಂದ್ರೀಯ ಮೀಸಲು ಪೊಲೀಸ್ ಪಡೆ ಹೊರತುಪಡಿಸಿ ಸುಮಾರು 2,000 ಪೊಲೀಸ್ ಸಿಬ್ಬಂದಿ ಕೃಷ್ಣ ದೇವಸ್ಥಾನ ಮತ್ತು ಈದ್ಗಾ ಮತ್ತು ಸುತ್ತಮುತ್ತ ಬೀಡುಬಿಟ್ಟಿದ್ದಾರೆ. ‘ಕ್ರಿಮಿನಲ್ ಪ್ರೊಸಿಜರ್ ಕೋಡ್ (CrPC) ಯ ಸೆಕ್ಷನ್ 144 ಜಾರಿಯಲ್ಲಿದೆ ಮತ್ತು ನಿಷೇಧಿತ ಆದೇಶಗಳನ್ನು ಉಲ್ಲಂಘಿಸಿದ್ದಲ್ಲಿ ಅವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜಾರಿಯಾಗಲಿದೆ. ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ನಮ್ಮ ಪೊಲೀಸರು ಸಜ್ಜಾಗಿದ್ದಾರೆಂದು ಮಥುರಾದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಡಾ. ಗೌರವ್ ಗ್ರೋವರ್ ಹೇಳಿದ್ದಾರೆ.

Share Post