National

ರಾವತ್‌ ಪಾರ್ಥಿವ ಶರೀರಕ್ಕೆ ಪ್ರಧಾನಿ ಮೋದಿ ಸೇರಿದಂತೆ ಗಣ್ಯರ ನಮನ

ನವದೆಹಲಿ: ಹೆಲಿಕಾಪ್ಟರ್‌ ದುರಂತದಲ್ಲಿ ಮೃತಪಟ್ಟ ಜನರಲ್‌ ಬಿಪಿನ್‌ ರಾವತ್‌ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ದೆಹಲಿಯ ಕಾಮರಾಜಮಾರ್ಗದಲ್ಲಿರುವ ನಿವಾಸದಲ್ಲಿ ವ್ಯವಸ್ಥೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ತ್ರಿ-ಕೋನಾ ಸೇನಾ ಪಡೆಯ ಮುಖ್ಯಸ್ಥರು ಪುಷ್ಪನಮನವನ್ನು ಅರ್ಪಿಸಿದ್ರು. ಇಂದು ಬೆಳಗ್ಗೆಯಿಂದ ರಾಜಕೀಯ ಗಣ್ಯರು, ಸೇನಾಧಿಕಾರಿಗಳು ಹಾಗೂ ಕುಟುಂಬಸ್ಥರು ಅಂತಿಮ ದರ್ಶನವನ್ನು ಪಡೆದರು. ರಾವತ್‌ ನಿವಾಸದಲ್ಲಿ ಬೆಳಗ್ಗೆ 11ಗಂಟೆಯಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬಳಿಕ ಕಾಮರಾಜ್ ಮಾರ್ಗದಿಂದ ದೆಹಲಿ ಕಂಟೋನ್ಮೆಂಟ್‌ನ ಬ್ರಾರ್ ಸ್ಕ್ವೇರ್ ಸ್ಮಶಾನದವರೆಗೆ ಅಂತ್ಯಕ್ರಿಯೆ ಮೆರವಣಿಗೆ ನಡೆಯಲಿದೆ. ಅಂತಿಮವಾಗಿ ದೆಹಲಿ ಕಂಟೋನ್ಮೆಂಟ್‌ನಲ್ಲಿ ಸಕಲ ಸೇನಾ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಿಸಲಾಗುತ್ತದೆ.

 

Share Post