National

ಕಾಶ್ಮೀರದಲ್ಲಿ ಮುಂದುವರೆದ ಕಾರ್ಯಾಚರಣೆ; ಇವತ್ತೂ ಇಬ್ಬರು ಉಗ್ರರ ಹತ್ಯೆ

ಶ್ರೀನಗರ; ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆ ಮುಂದುವರೆದಿದೆ. ಇಂದು ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿವೆ. ಈ ವೇಳೆ ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.

ಅವಂತಿಪೋರಾ ಪ್ರದೇಶದ ರಾಜ್‌ಪೋರಾದಲ್ಲಿ ಎನ್‌ಕೌಂಟರ್ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗುಂಡಿನ ದಾಳಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಎನ್‌ಕೌಂಟರ್ ನಡೆದ ಸ್ಥಳದಲ್ಲಿ ಎರಡು ರೈಫಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಹತ್ಯೆಯಾದ ಉಗ್ರರನ್ನು ತ್ರಾಲ್‌ನ ಶಾಹಿದ್ ರಾಥರ್ ಮತ್ತು ಶೋಪಿಯಾನ್‌ನ ಉಮರ್ ಯೂಸುಫ್ ಎಂದು ಗುರುತಿಸಲಾಗಿದೆ. ಇವರು ಹಲವು ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದರು ಎಂದು ಕಾಶ್ಮೀರದ ಐಜಿಪಿ ವಿಜಯ್‌ ಕುಮಾರ್‌ ಟ್ವೀಟ್ ಮಾಡಿದ್ದಾರೆ.

Share Post