National

ಮಹಾ-ಕರ್ನಾಟಕ ಗಡಿ ವಿವಾದ; ಬೊಮ್ಮಾಯಿಗೆ ಹೇಳಿಕೆಗೆ ಠಾಕ್ರೆ ವಿರೋಧ

ಮುಂಬೈ; ಮಹಾರಾಷ್ಟ್ರದ 44 ಗ್ರಾಮಗಳು ಕರ್ನಾಟಕಕ್ಕೆ ಸೇರಬೇಕು ಎಂದಿರುವ ಮುಖ್ಯಮಂತ್ರಿ ಬೊಮ್ಮಾಯಿ ಹೇಳಿಕೆಗೆ ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್‌ ಠಾಕ್ರೆ ವಿರೋಧ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಮುಖ್ಯಮಂತ್ರಿ ಬೊಮ್ಮಾಯಿಯವರು ಗಡಿ ಸಮಸ್ಯೆಗಳ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ. ಆದ್ರೆ ಆ ಗ್ರಾಮಗಳೆಲ್ಲವೂ ನಮ್ಮ ಹಿಡಿತದಲ್ಲೇ ಇವೆ ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ.

ಇದಕ್ಕೂ ಮುನ್ನ ಮಹಾರಾಷ್ಟ್ರ ಸರ್ಕಾರದ ವಿರೋಧ ಪಕ್ಷದ ನಾಯಕ ಅಜಿತ್ ಪವಾರ್ ಅವರು ಎರಡೂ ರಾಜ್ಯಗಳ ನಡುವಿನ ಗಡಿ ವಿವಾದದ ಕುರಿತು ಬಸವರಾಜ ಬೊಮ್ಮಾಯಿ ಅವರ ಹೇಳಿಕೆಯನ್ನು ಖಂಡಿಸಿದ್ದರು.

Share Post