NationalPolitics

ನಿರುದ್ಯೋಗ, ಬೆಲೆ ಏರಿಕೆ; ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

ನವದೆಹಲಿ; ನಿರುದ್ಯೋಗ, ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್‌ ಪಕ್ಷ ಇಂದು ದೇಶಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ.. ರಾಹುಲ್‌ ಗಾಂಧಿ ಸೇರಿದಂತೆ ಕಾಂಗ್ರೆಸ್‌ನ ಸಂಸದರು ಕಪ್ಪು ಬಟ್ಟೆ ಧರಿಸಿ ಸಂಸತ್ತಿಗೆ ಆಗಮಿಸಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್‌ ನಾಯಕರು ಇಂದು ಪ್ರಧಾನಿ ನಿವಾಸಕ್ಕೆ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿದೆ.

ಇನ್ನು ಅಧಿವೇಶನಕ್ಕೆ ಆಗಮಿಸುವುದಕ್ಕೂ ಮೊದಲು ರಾಹುಲ್‌ ಗಾಂಧಿ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದರು. ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರದ ವಿರುದ್ಧ ಧ್ವನಿ ಎತ್ತಿದರೆ ಆಕ್ರಮಣ ಮಾಡಲಾಗುತ್ತಿದೆ. ಇಡಿ ದಾಳಿ ಮೂಲಕ ಸರ್ಕಾರದ ವಿರುದ್ಧ ಧ್ವನಿ ಎತ್ತಿದವರ ವಿರುದ್ಧ ಆಕ್ರಮಣ ಮಾಡಲಾಗುತ್ತಿದೆ. ಸತ್ಯ ಮಾತನಾಡಿದ್ದಕ್ಕೆ ನನ್ನನ್ನು ಕರೆದು ವಿಚಾರಣೆ ಮಾಡಲಾಗಿದೆ. ಕೇಂದ್ರ ಸರ್ಕಾರ ಗಾಂಧಿ ಕುಟುಂಬವನ್ನು ಟಾರ್ಗೆಟ್‌ ಮಾಡುತ್ತಿದೆ ಎಂದು ರಾಹುಲ್‌ ಗಾಂಧಿ ಹೇಳಿದರು.

ಜರ್ಮನಿಯ ಹಿಟ್ಲರ್‌ ಕೂಡಾ ಚುನಾವಣೆಯಲ್ಲಿ ಗೆದ್ದಿದ್ದ. ಎಲ್ಲಾ ಸರ್ಕಾರಿ ಕಚೇರಿಗಳನ್ನೂ ತನ್ನ ಹಿಡಿಯದಲ್ಲಿ ಇಟ್ಟುಕೊಂಡಿದ್ದ. ಇಲ್ಲೂ ಕೂಡಾ ಹಾಗೆಯೇ ಆಗಿದೆ. ದೇಶದಲ್ಲಿ ಇಂದು ಪ್ರಜಾಪ್ರಭುತ್ವ ವ್ಯವಸ್ಥೆ ಇಲ್ಲ ಎಂದು ರಾಹುಲ್‌ ಗಾಂಧಿ ಆಕ್ರೋಶ ವ್ಯಕ್ತಪಡಿಸಿದರು.

Share Post