ಇಂದು ಕೇಂದ್ರದ ಬಜೆಟ್ ಮಂಡಿಸಲಿದ್ದಾರೆ ನಿರ್ಮಲಾ ಸೀತಾರಾಮನ್
ಕೇಂದ್ರ ಸರ್ಕಾರದ 2022-23 ನೇ ಸಾಲಿನ ಬಜೆಟ್ ಇಂದು ಬೆಳಗ್ಗೆ 11 ಗಂಟೆಗೆ ಸಂಸತ್‌ನಲ್ಲಿ ಮಂಡನೆಯಾಗಲಿದೆ. ಹಣಕಾಸು ಸಚಿವೆಯಾಗಿರುವ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನಕ್ಕೆ ಜನವರಿ 31ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಭಾಷಣದೊಂದಿಗೆ ಚಾಲನೆ ದೊರೆತಿತ್ತು. ಮೊದಲ ಭಾಗದ ಕೇಂದ್ರ ಬಜೆಟ್ ಅಧಿವೇಶನವು ಜನವರಿ 31ರಿಂದ ಫೆಬ್ರವರಿ 11ರ ತನಕ ನಡೆಯಲಿದೆ. ಮತ್ತು ಬಜೆಟ್ ಅಧಿವೇಶನದ ಎರಡನೇ ಭಾಗವು ಮಾರ್ಚ್ 14ರಿಂದ ಏಪ್ರಿಲ್ 8ರ ತನಕ ನಡೆಯಲಿದೆ.
ಕೇಂದ್ರ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ವಿತ್ತ ಸಚಿವಾಲಯಕ್ಕೆ ಇಂದು ಆಗಮಿಸಿದ್ದಾರೆ. ಬೆಳಗ್ಗೆ 11 ಗಂಟೆಗೆ ಬಜೆಟ್ ಮಂಡಿಸುತ್ತಾರೆ. 2020ರಲ್ಲಿ ದಾಖಲೆಯ 160 ನಿಮಿಷ ಬಜೆಟ್ ಮಂಡಿಸಿದ್ದರು. ಈ ಬಾರಿ 90ರಿಂದ 120 ನಿಮಿಷಗಳ ಕಾಲ ಬಜೆಟ್ ಮಂಡನೆ ಸಾಧ್ಯತೆಯಿದೆ.
ನಾಲ್ಕನೇ ಬಾರಿಗೆ ಕಾಗದ ರಹಿತ ಬಜೆಟ್ ಮಂಡಿಸಲಿದ್ದಾರೆ. ಸೂಟ್‌ಕೇಸ್ ಬದಲು ಟ್ಯಾಬ್ ಬಳಸಲಿದ್ದಾರೆ.