NationalPolitics

ಮಹಿಳಾ ಮೀಸಲಾತಿ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ

ನವದೆಹಲಿ; ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಇಂದು ಸಂಸತ್ತಿನಲ್ಲಿ ಈ ಮಸೂದೆ ಮಂಡನೆಯಾಗುವ ಸಾಧ್ಯತೆ ಇದೆ. 

ಮಹಿಳೆಯರಿಗೆ ಮೀಸಲಾತಿ ನೀಡುವ ಮಸೂದೆ ಮಂಡನೆಯಾಗಿ ಹಲವು ವರ್ಷಗಳಾಗಿವೆ. ಆದ್ರೆ ಇದಕ್ಕೆ ಅನುಮೋದನೆ ಸಿಕ್ಕಿಲ್ಲ. ಹೀಗಾಗಿ ಈ ಮಸೂದೆ ಪಾಸ್‌ ಮಾಡಬೇಕು ಎಂದು ವಿಪಕ್ಷಗಳು ಆಗ್ರಹಿಸಿದ್ದವು. ಭಾನುವಾರ ದೆಹಲಿಯಲ್ಲಿ ನಡೆದ ಇಂಡಿಯಾ ಒಕ್ಕೂಟದ ಸಭೆಯಲ್ಲಿ ಈ ಬಗ್ಗೆ ಆಗ್ರಹ ಕೇಳಿಬಂದಿತ್ತು. ಸಂಸತ್ತಿನ ಹೊಸ ಕಟ್ಟಡದಲ್ಲಿ ಮಸೂದೆ ಅಂಗೀಕಾರ ಮಾಡಬೇಕು ಎಂದು ಆಗ್ರಹ ಮಾಡಲಾಗಿತ್ತು. ಈ ಬೆನ್ನಲೇ ಕೇಂದ್ರ ಸರ್ಕಾರ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಂಡಿದೆ.

 

Share Post