ರಾಮಮಂದಿರ ಗರ್ಭಗುಡಿಗೆ ಸಿಎಂ ಯೋಗಿ ಶಂಕುಸ್ಥಾಪನೆ
ಅಯೋಧ್ಯೆ; ಆಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಗರ್ಭಗುಡಿಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಒಂದೂವರೆ ವರ್ಷದಿಂದ ರಾಮಂಂದಿರ ಕಾಮಗಾರಿ ನಡೆಯುತ್ತಿದ್ದು, ಇಂದಿನಿಂದ ದೇಗುಲದ ಗರ್ಭಗುಡಿಯ ಕಾಮಗಾರಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಗರ್ಭಗುಡಿಗೆ ಸಿಎಂ ಆದಿತ್ಯನಾಥ್ ಶಂಕುಸ್ಥಾಪನೆ ನೆರವೇರಿಸಿದರು.
2020ರ ಆಗಸ್ಟ್ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರ ನಿರ್ಮಾಣ ಶಂಕು ಸ್ಥಾಪನೆ ಮಾಡಿದ್ದರು. ಅಂದಿನಿಂದ ದೇಗುಲದ ಕಾಮಗಾರಿ ಭರದಿಂದ ನಡೆಯುತ್ತಿದೆ. ಇನ್ನು ಈ ಬಗ್ಗೆ ಹೇಳಿಕೆ ನೀಡಿರುವ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರೈ, ಬೆಳಗ್ಗೆ 9 ಗಂಟೆಗೆ ಶಿಲಾನ್ಯಾಸ ನೆರವೇರಿಸಲಾಗಿದೆ. ಅಯೋಧ್ಯೆಯ 90 ಸಂತರು ಮತ್ತು ಮಹಾಪುರುಷರಿಗೆ ಪೂಜೆಗೆ ಆಹ್ವಾನ ನೀಡಲಾಗಿತ್ತು. ಗರ್ಭಗುಡಿಯನ್ನ ಕೆಂಪು ಕಲ್ಲುಗಳಿಂದ ನಿರ್ಮಾಣ ಮಾಡಲಾಗುತ್ತಿದೆ ಎಂದಿದ್ದಾರೆ.