ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯಾನಾಥ್ 2.0 ಸರ್ಕಾರ: ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ-ರಾಜಕೀಯ ಗಣ್ಯರು ಭಾಗಿ
ಲಖ್ನೋ: ಉತ್ತರಪ್ರದೇಶದಲ್ಲಿ ಮತ್ತೆ ಅಧಿಕಾರದ ಗದ್ದುಗೆ ಏರಿದ್ದಾರೆ ಸಿಎಂ ಯೋಗಿ ಆದಿತ್ಯಾನಾಥ್. ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಈಶ್ವರನ ಹೆಸರಿನಲ್ಲಿ ಯೋಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಲಖ್ನೋದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಸೇರಿದಂತೆ, ಬಿಜೆಪಿ ಆಡಳಿತವಿರುವ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ ಬಿಜೆಪಿ ನಾಯಕರು, ಸೆಲೆಬ್ರೆಟಿಗಳು, ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿಯಾಗಿ ಕೇಶವ್ ಮೌರ್ಯ ಮತ್ತು ಬ್ರಿಜೇಶ್ ಪಾಠಕ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
Lucknow | BJP's Yogi Adityanath takes oath as the Chief Minister of Uttar Pradesh for the second consecutive term. pic.twitter.com/ubAZ5nHTB4
— ANI UP/Uttarakhand (@ANINewsUP) March 25, 2022
ಭೂಪೇಂದ್ರ ಸಿಂಗ್ ಚೌಧರಿ, ಅನಿಲ್ ರಾಜ್‌ಭರ್, ಜಿತಿನ್ ಪ್ರಸಾದ, ರಾಕೇಶ್ ಸಚನ್,ಲಕ್ಷ್ಮಿ ನಾರಾಯಣ ಚೌಧರಿ, ಜೈವಿರ್ ಸಿಂಗ್, ಧರ್ಮಪಾಲ್ ಸಿಂಗ್, ನಂದ ಗೋಪಾಲ್ ಗುಪ್ತ ‘ನಂದಿ’ ಉತ್ತರ ಪ್ರದೇಶ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
Lucknow | Laxmi Narayan Chaudhary, Jaivir Singh, Dharam Pal Singh, Nand Gopal Gupta 'Nandi' take oath as Ministers in the Uttar Pradesh government. pic.twitter.com/jW2vTsYTcF
— ANI UP/Uttarakhand (@ANINewsUP) March 25, 2022