National

ಮಥುರಾ ಬಳಿ ಭೀಕರ ಅಪಘಾತ; ಒಂದೇ ಕುಟುಂಬದ 7 ಮಂದಿ ದುರ್ಮರಣ

ಮಥುರಾ; ಮಥುರಾ ಬಳಿ ಭೀಕರ ಅಪಘಾತ ನಡೆದಿದ್ದು, ಒಂದೇ ಕುಟುಂಬದ ಏಳು ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿನ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ.

ಹರ್ದೋಯಿಯಲ್ಲಿ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ನೋಯ್ಡಾಕ್ಕೆ ಹಿಂತಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.  ಮುಂದಿದ್ದ ವಾಹನವೊಂದಕ್ಕೆ ಕಾರು ಡಿಕ್ಕಿ ಹೊಡೆದಿದ್ದು, ಕಾರು ಸಂಪೂರ್ಣ ನಜ್ಜುಗುಜಾಗಿದೆ. ಕಾರಿನಲ್ಲಿದ್ದ ಒಂಬತ್ತು ಮಂದಿಯಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ.

ಚಾಲಕ ಕಾರನ್ನು ಅತಿವೇಗವಾಗಿ ಚಲಾಯಿಸುತ್ತಿದ್ದ. ಈ ಕಾರಣದಿಂದಲೇ ಚಾಲಕನ ನಿಯಂತ್ರಣ ತಪ್ಪಿ ಕಾರು ಮುಂದಿದ್ದ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಏಳು ಜನರು ಮೃತಪಟ್ಟಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಶೋಕ ವ್ಯಕ್ತಪಡಿಸಿದ್ದಾರೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

Share Post