National

ಮೂರು ವರ್ಷಗಳಲ್ಲಿ 400ವಂದೇ ಮಾತರಂ ರೈಲುಗಳ ಚಾಲನೆ

ದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್‌ನಲ್ಲಿ ರೈಲ್ವೆ ಇಲಾಖೆಗೆ ದೊಡ್ಡ  ಮೊತ್ತವನ್ನು ಘೋಷಣೆ ಮಾಡಲಾಗಿದೆ. ಮೂರು ವರ್ಷಗಳಲ್ಲಿ 400 ಹೊಸ ತಲೆಮಾರಿನ ವಂದೇ ಭಾರತ್ ರೈಲುಗಳನ್ನು ಓಡಿಸಲಾಗುವುದು ಎಂದು ಹಣಕಾಸು ಸಚಿವರು ಹೇಳಿದ್ದಾರೆ.

ಮುಂದಿನ ಮೂರು ವರ್ಷಗಳಲ್ಲಿ 400 ಹೊಸ ತಲೆಮಾರಿನ ಭಾರತೀಯ ರೈಲುಗಳನ್ನು ಸುಧಾರಿತ ಸಾಮರ್ಥ್ಯದೊಂದಿಗೆ ಚಲಾಯಿಸಲಾಗುವುದು ಎಂದು ಹಣಕಾಸು ಸಚಿವರು ಹೇಳಿದರು. ಮುಂದಿನ ಮೂರು ವರ್ಷಗಳಲ್ಲಿ 100PM ಗತಿ ಶಕ್ತಿ ಕಾರ್ಗೋ ಟರ್ಮಿನಲ್‌ಗಳನ್ನು ಅಭಿವೃದ್ಧಿಪಡಿಸಲಾಗುವುದು ಮತ್ತು ಮೆಟ್ರೋ ವ್ಯವಸ್ಥೆಯನ್ನು ನಿರ್ಮಿಸಲು ಹೊಸ ವಿಧಾನಗಳನ್ನು ಅಳವಡಿಸಿಕೊಳ್ಳಲಾಗುವುದು ಎಂಬ ಭರವಸೆಯನ್ನು ನೀಡಿದ್ರು.

ಪರ್ವತ ಶ್ರೇಣಿಗಳಲ್ಲಿ ರಸ್ತೆ ಅಭಿವೃದ್ಧಿಗೆ ಪಿಪಿಪಿ ಮಾಡೆಲ್‌ಗೆ ಹೆಚ್ಚಿನ ಒತ್ತು ನೀಡಲಾಗುವುದೆಂದು ತಿಳಿಸಿದ್ದಾರೆ. ಜೊತೆಗೆ  ರಾಷ್ಟ್ರೀಯ ಹೆದ್ದಾರಿಯನ್ನು  25ಸಾವಿರ ಕಿಲೋ ವಿಸ್ತರಣೆ ಮಾಡುವ ಗುರಿಯನ್ನು ಹೊಂದಿರುವುದಾಗಿ ಶೀಘ್ರದಲ್ಲಿ ಅದನ್ನು ಜಾರಿ ಮಾಡುವ ಉದ್ದೇಶ ಇದೆ ಎಂಬುದನ್ನು ತಿಳಿಸಿದ್ದಾರೆ.

Share Post