ಗ್ರೂಪ್ ಕ್ಯಾಪ್ಟನ್‌ಗೆ ಸಕಲ ಸೇನಾ ಗೌರವಗಳೊಂದಿಗೆ ಅಂತಿಮ ವಿದಾಯ
ಮಧ್ಯಪ್ರದೇಶ: ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ, ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರ ಅಂತ್ಯಕ್ರಿಯೆ ಭೂಪಾಲ್‌ನಲ್ಲಿ ಸೇನಾ ಗೌರವಗಳೊಂದಿಗೆ ನೆರವೇರಿತು. ಡಿಸೆಂಬರ್ 8ರಂದು ತಮಿಳುನಾಡಿನ ಕೂನೂರಿನಲ್ಲಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿತ್ತು. ದುರಂತದಲ್ಲಿ ಗಂಭೀರ ಗಾಯಗೊಂಡಿದ್ದ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಬೆಂಗಳೂರಿನ ಕಮಾಂಡೊ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ರು. ಈಮದು ಅವರ ಪಾರ್ಥಿವ ಶರೀರವನ್ನು ಮಧ್ಯಪ್ರದೇಶದ ಭೂಪಾಲ್‌ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಭದ್ರತಾ ಪಡೆಯಿಂದ ಗಾರ್ಡ್ ಆಪ್ ಹಾನರ್ ನಿರ್ವಹಿಸಲಾಯಿತು. ಹಿರಿಯ ಸೇನಾಧಿಕಾರಿಗಳು ಪುಷ್ಪನಮನ ಸಲ್ಲಿಸಿದ್ರು. ಬಳಿಕ ಸಂಪೂರ್ಣ ವಿಧಿವಿಧಾನಗಳೊಂದಿಗೆ ವರುಣ್ ಸಿಂಗ್ ಅವರ ಅಂತ್ಯಕ್ರಿಯೆ ನಡೆಯಿತು.