National

ಹೆಚ್ಚಿನ ಚಿಕಿತ್ಸೆಗಾಗಿ ವರುಣ್ ಸಿಂಗ್‌ ಅವರನ್ನು ಬೆಂಗಳೂರಿನ ಕಮಾಂಡ್‌ ಆಸ್ಪತ್ರೆಗೆ ರವಾನೆ ಸಾಧ್ಯತೆ

ವೆಲ್ಲಿಂಗ್ಟನ್‌: ತಮಿಳುನಾಡಿನಲ್ಲಿ ನಡೆದ ಸೇನಾ ಹೆಲಿಕಾಪ್ಟರ್‌ ದುರಂತದಲ್ಲಿ ಬದುಕುಳಿದಿರುವ ಏಕೈಕ ಅಧಿಕಾರಿ ಗ್ರೂಪ್‌ ಕಮಾಂಡರ್‌ ವರುಣ್‌ ಸಿಂಗ್‌ ಅವರ ಆರೋಗ್ಯ ಸ್ಥಿರವಾಗಿದೆ. ಸದ್ಯ ತಮಿಳುನಾಡಿನ ವೆಲ್ಲಿಂಗ್ಟನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರನ್ನು ಬೆಂಗಳೂರಿಗೆ ಸ್ಥಳಾಂತರಿಸುವ ಸಾಧ್ಯತೆ ಇದೆ.

ವೆಲ್ಲಿಂಗ್ಟನ್‌ ಸೇನಾ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಸೌಲಭ್ಯಗಳಿವೆ. ಆದರೂ ಹೆಚ್ಚಿನ ಚಿಕಿತ್ಸೆ ಬೆಂಗಳೂರಿಗೆ ಶಿಫ್ಟ್‌ ಮಾಡುವುದು ಒಳ್ಳೆಯದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಕಮಾಂಡ್‌ ಆಸ್ಪತ್ರೆಗೆ ವರುಣ್‌ ಸಿಂಗ್‌ ಅವರನ್ನು ಶಿಫ್ಟ್‌ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ.

ವರುಣ್‌ ಸಿಂಗ್‌ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರೂ, ಚಿಕಿತ್ಸೆ ಸ್ಪಂದಿಸುತ್ತಿದ್ದಾರೆ. ಅವರಿಗೆ ಜೀವರಕ್ಷಕಗಳನ್ನು ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಲೋಕಸಭೆಯಲ್ಲಿ ಮಾಹಿತಿ ನೀಡಿದ್ದಾರೆ. ಈ ಬೆನ್ನಲ್ಲೇ ವರುಣ್‌ ಸಿಂಗ್‌ ಅವರನ್ನು ಬೆಂಗಳೂರಿಗೆ ಶಿಫ್ಟ್‌ ಮಾಡಲು ಚಿಂತಿಸಲಾಗುತ್ತಿದೆ.

Share Post