National

ಶಿಮ್ಲಾದಲ್ಲಿ ಹೆಚ್ಚಿದ ಪ್ರವಾಸಿಗರು; ಕೊರೋನಾ ಹಿನ್ನೆಲೆಯಲ್ಲಿ ತೀವ್ರ ತಪಾಸಣೆ

ಶಿಮ್ಲಾ: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಶಿಮ್ಲಾದಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಿದೆ. ಆದರೆ ದೇಶದಲ್ಲಿ ಕೊರೋನಾ ಹೆಚ್ಚಿರುವುದರಿಂದ ಪ್ರವಾಸಿಗರಿಗೆ ಪೊಲೀಸರು ಸೂಚನೆ ನೀಡುತ್ತಿದ್ದಾರೆ. ಕೊರೋನಾ ನಿಯಮಾವಳಿಗಳನ್ನು ಪಾಲಿಸುವಂತೆ ಎಚ್ಚರಿಕೆ ನೀಡುತ್ತಿದ್ದಾರೆ.

ಅಲ್ಲಲ್ಲಿ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿರುವ ಪೊಲೀಸರು ಶಿಮ್ಲಾಗೆ ಬರುವ ಎಲ್ಲಾ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದಾರೆ. ಪ್ರವಾಸಿಗರು ಕೊರೋನಾ ನಿಯಮಗಳನ್ನು ಪಾಲಿಸುತ್ತಿದ್ದಾರೆಯೇ ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಂಡು, ನಂತರ ವಾಹನಗಳನ್ನು ಮುಂದಕ್ಕೆ ಬಿಡುತ್ತಿದ್ದಾರೆ.

ಇನ್ನು ಹೊಸ ವರ್ಷಾಚರಣೆ ವೇಳೆ ಕೆಲವರು ದುಷ್ಕೃತ್ಯ ಎಸಗುವ ಸಾಧ್ಯತೆಗಳು ಇರುತ್ತವೆ. ಈ ಹಿನ್ನೆಲೆಯಲ್ಲೂ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ವಾಹನಗಳಲ್ಲಿ ಸ್ಫೋಟಕಗಳು, ಮಾರಾಕಾಸ್ತ್ರಗಳೇನಾದರೂ ಇವೆಯೇ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದರೆ, ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

Share Post