National

ರಾಷ್ಟ್ರಪತಿ ಚುನಾವಣೆ; ಮತ ಚಲಾಯಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ; ರಾಷ್ಟ್ರಪತಿ ಆಯ್ಕೆಗಾಗಿ ಸಂಸತ್ತು ಮತ್ತು ರಾಜ್ಯಗಳ ವಿಧಾನಸಭೆಗಳಲ್ಲಿ ಇರಿಸಲಾಗಿರುವ ಮತಗಟ್ಟೆಗಳ ಮತದಾನ ನಡೆಯುತ್ತಿದೆ. ಸಂಸತ್ತಿನ ಆವರಣದಲ ಮತಗಟ್ಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮತ ಚಲಾಯಿಸಿದರು. ಇದೇ ವೇಳೆ ಕೇಂದ್ರ ಸಚಿವರಾದ ಪ್ರಲ್ಹಾದ್‌ ಜೋಷಿ ಸೇರಿ ಹಲವರು ತಮ್ಮ ಹಕ್ಕು ಚಲಾಯಿಸಿದರು.

ಅನಂತರ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಈ ಚುನಾವಣೆಯಲ್ಲಿ ದಾಖಲೆಯ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದ್ದಾರೆ.

Share Post